ಯಾದಗಿರಿ: ಕುಡಿದ ಅಮಲಿನಲ್ಲಿ ಕ್ಷುಲ್ಲಕ ಕಾರಣಕ್ಕೆ ಅರಣ್ಯಾಧಿಕಾರಿಯೊಬ್ಬರನ್ನು ಬರ್ಬರವಾಗಿ ಹತ್ಯೆಗೈದಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಯಾದಗಿರಿಯಲ್ಲಿ ಈ ಘಟನೆ ನಡೆದಿದೆ.
ಜೂ. 5ರಂದು ಯಾದಗಿರಿ ಜಿಲ್ಲೆಯ ಶಹಾಪುರದ ಮೋಟಗಿ ಬಾರ್ ಆಂಡ್ ರೆಸ್ಟೋರೆಂಟ್‌ನಲ್ಲಿ ಈ ಕೊಲೆ ನಡೆದಿದೆ. ಶಹಾಪುರ ಅರಣ್ಯಾಧಿಕಾರಿ ಮಹೇಶ್ ಕನಕಟ್ಟಿ ಹತ್ಯೆಯಾದ ದುರ್ದೈವಿ. ಕುಡಿತದ ಅಮಲಿನಲ್ಲಿ ಕ್ಷುಲ್ಲಕ ಕಾರಣಕ್ಕೆ ಮಹೇಶ್‌ರವರನ್ನು ಆರೋಪಿಗಳು ಹತ್ಯೆಗೈದಿದ್ದರು. ಇದೀಗ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ. ರಾಜು, ರೇಖು ನಾಯ್ಕ್, ತಾರಾ ಸಿಂಗ್, ನರಸಿಂಗ್, ಪ್ರಕಾಶ್ ಬಂಧಿತರು.
ಜೂ. 5ರಂದು ಮಹೇಶ್ ಊಟಕ್ಕೆಂದು ರೆಸ್ಟೋರೆಂಟ್‌ಗೆ ತೆರಳಿದ್ದರು. ಈ ವೇಳೆ ಆರೋಪಿಗಳು ಕುಡಿದು ಚೀರಾಡುತ್ತಿದ್ದರು. ಅವರನ್ನು ತಡೆಯಲು ಹೋದಾಗ ಆರೋಪಿಗಳು ಮಹೇಶ್ ಮೇಲೆ ಬಡಿಗೆಯಿಂದ ಹೊಡೆದು ಹತ್ಯೆ ಮಾಡಿದ್ದಾರೆ.
ಮಹೇಶ್ ಅವರ ಶವವನ್ನು ರೆಸ್ಟೋರೆಂಟ್ ಬಳಿ ಎಸೆದು ಹೋಗಲಾಗಿತ್ತು. ಮರುದಿನ ಪೊಲೀಸರು ಮರಣೋತ್ತರ ಪರೀಕ್ಷೆಗೆ ಶವವನ್ನು ಕಳುಹಿಸಿದ್ದರು. ಮಹೇಶ್ ಪತ್ನಿ ಇದೊಂದು ಕೊಲೆ ಎಂದು ಸಂಶಯ ವ್ಯಕ್ತಪಡಿಸಿದ್ದರು. ಇದರಿಂದ ಅನುಮಾನಗೊಂಡು ರೆಸ್ಟೋರೆಂಟ್‌ನ ಸಿಸಿಟಿವಿ ಪರಿಶೀಲಿಸಿದಾಗ ಕೊಲೆ ಪ್ರಕರಣ ಬೆಳಕಿಗೆ ಬಂದಿದೆ. ಶಹಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.