ಅನಾರೋಗ್ಯದಿಂದ ಬಳಲುತ್ತಿದ್ದಂತ ಮಾಜಿ ಸಿಎಂ ವೀರಪ್ಪ ಮೊಯ್ಲಿ ಅವರ ಪುತ್ರಿ ಹಂಸ ಮೊಯ್ಲಿ(46) ಅವರು ಇಂದು ನಿಧನರಾಗಿದ್ದಾರೆ ಎಂಬುದಾಗಿ ತಿಳಿದು ಬಂದಿದೆ.
ಅನಾರೋಗ್ಯದಿಂದ ಬಳಲುತ್ತಿದ್ದಂತ ವೀರಪ್ಪ ಮೊಯ್ಲಿ ಅವರ ಪುತ್ರಿ ಹಂಸ ಮೊಯ್ಲಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು.
ಇಂತಹ ಅವರು ಇಂದು ವಿಧಿವಶರಾಗಿದ್ದಾರೆ ಎಂಬುದಾಗಿ ಕುಟುಂಬಸ್ಥರು ತಿಳಿಸಿದ್ದಾರೆ.
ಹಂಸ ಮೊಯ್ಲಿ ಅವರು ಭರತನಾಟ್ಯ ನೃತ್ಯಗಾರ್ತಿ ಹಾಗೂ ಪ್ರಾಯೋಗಿ ನೃತ್ಯ ಸಂಯೋಜಿಕಿಯಾಗಿ ಖ್ಯಾತಿಯನ್ನು ಪಡೆದಿದ್ದರು. ಇದಲ್ಲದೇ ದೇವದಾಸಿಯರ ಜೀವನವನ್ನು ಆಧರಿಸಿದಂತ ತಮಿಳಿನ ಖ್ಯಾತ ಚಲನಚಿತ್ರ ಶೃಂಗಾರಂನಲ್ಲಿ ಕೂಡ ಅಭಿನಯಿಸಿ ನಟಿ ಅಂತನೂ ಕರೆಸಿಕೊಂಡಿದ್ದರು. ಇಂತಹ ಅವರು ಇಂದು ನಿಧನರಾಗಿದ್ದಾರೆ.
ಪುತ್ರಿಯ ನಿಧನದ ಸುದ್ದಿ ತಿಳಿದಂತ ಮಾಜಿ ಸಿಎಂ ವೀರಪ್ಪ ಮೊಯ್ಲಿ ದೆಹಲಿಯಿಂದ ಬೆಂಗಳೂರಿಗೆ ಬರುತ್ತಿದ್ದಾರೆ ಎಂಬುದಾಗಿ ತಿಳಿದು ಬಂದಿದೆ.