ಚಂಡೀಗಢ: ಹರಿಯಾಣದ ಮಾಜಿ ಮುಖ್ಯಮಂತ್ರಿ ಭಾರತೀಯ ರಾಷ್ಟ್ರೀಯ ಲೋಕದಳ ಮುಖ್ಯಸ್ಥ ಓಂ ಪ್ರಕಾಶ್ ಚೌಟಾಲ (89) ಶುಕ್ರವಾರ, ಡಿ. 20ರಂದು ನಿಧನರಾಗಿದ್ದಾರೆ.
ಓಂ ಪ್ರಕಾಶ್ ಚೌಟಾಲ ಗುರುಗ್ರಾಮದ ಸ್ವಗೃಹದಲ್ಲಿ ನಿಧನರಾಗಿರುವ ವರದಿಯಾಗಿದೆ. ಭಾರತದ ಮಾಜಿ ಉಪ ಪ್ರಧಾನಿ ಚೌಧರಿ ದೇವಿಲಾಲ್ ಅವರ ಪುತ್ರರಾಗಿರುವ ಓಂ ಪ್ರಕಾಶ್ ಚೌಟಾಲಾ ಅವರು ಹರಿಯಾಣದ ಐದು ಭಾರಿ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿದರು.
ಓಂ ಪ್ರಕಾಶ್ ಅವರ ಪತ್ನಿ ಸ್ನೇಹ ಲತಾ ಆಗಸ್ಟ್ 2019ರಲ್ಲಿ ನಿಧನರಾಗಿದ್ದು, ದಂಪತಿಗೆ ಅಭಯ್ ಸಿಂಗ್ ಮತ್ತು ಅಜಯ್ ಸಿಂಗ್ ಸೇರಿದಂತೆ ಮೂವರು ಪುತ್ರಿಯರು ಮತ್ತು ಇಬ್ಬರು ಗಂಡು ಮಕ್ಕಳಿದ್ದಾರೆ. ಅಭಯ್ ಸಿಂಗ್ ಚೌಟಾಲಾ ಅವರು ಹರಿಯಾಣದ ಎಲೆನಾಬಾದ್ ಕ್ಷೇತ್ರದ ಶಾಸಕರಾಗಿದ್ದಾರೆ. ಅಲ್ಲದೆ, ಅಕ್ಟೋಬರ್ 2014ರಿಂದ ಮಾರ್ಚ್ 2019ರವರೆಗೆ ಹರಿಯಾಣ ವಿಧಾನಸಭೆಯಲ್ಲಿ ವಿರೋಧ ಪಕ್ಷದ ನಾಯಕರಾಗಿದ್ದರು.