ಹೆಬ್ರಿ : ಕಾರ್ಕಳದ ಮಾಜಿ ಶಾಸಕ ದಿವಂಗತ ಹೆಬ್ರಿ ಗೋಪಾಲ ಭಂಡಾರಿ ಅವರ ಪ್ರಥಮ ಪುತ್ರ ಸುದೀಪ್ ಭಂಡಾರಿ ಅವರು ಬ್ರಹ್ಮಾವರದ ಬಾರ್ಕೂರಿನಲ್ಲಿ ಅಕ್ಟೋಬರ್ 13ರ ರಾತ್ರಿ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದು ಕಾರ್ಕಳ ಶಾಸಕ ಸುನೀಲ್ ಕುಮಾರ್ ಭಾನುವಾರ ಹುತ್ತುರ್ಕೆಯ ಮನೆಗೆ ಭೇಟಿ ಕುಟುಂಬಕ್ಕೆ ಸಾಂತ್ವನ ಹೇಳಿದ್ದಾರೆ.
ಬಳಿಕ ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯವರೊಂದಿಗೆ ಮಾತನಾಡಿ ಪ್ರಕರಣದ ಬಗ್ಗೆ ಶೀಘ್ರವಾಗಿ ಸೂಕ್ತ ತನಿಖೆ ನಡೆಸಿ ಕುಟುಂಬಕ್ಕೆ ನ್ಯಾಯ ಒದಗಿಸುವಂತೆ ಒತ್ತಾಯಿಸಿದ್ದಾರೆ. ಹೆಬ್ರಿ ಗ್ರಾಮ ಪಂಚಾಯತಿ ಅಧ್ಯಕ್ಷ ತಾರಾನಾಥ ಬಂಗೇರ, ಬಿಜೆಪಿ ಅಧ್ಯಕ್ಷ ಲಕ್ಷ್ಮೀ ನಾರಾಯಣ ನಾಯಕ್, ಪಕ್ಷದ ಪ್ರಮುಖರು ಹಾಜರಿದ್ದರು

