ಬೆಂಗಳೂರು: ಅತ್ಯಾಚಾರ ಪ್ರಕರಣದಲ್ಲಿ ಬಂಧನಕ್ಕೆ ಒಳಗಾದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರಿಗೆ ಹೈಕೋರ್ಟ್ ತಾತ್ಕಾಲಿಕ ರಿಲೀಫ್ ನೀಡಿದೆ.
ಪ್ರಕರಣ ರದ್ದು ಕೋರಿ ಪ್ರಜ್ವಲ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಕೋರ್ಟ್ ಆರೋಪ ನಿಗದಿ ಮಾಡದಂತೆ ಹೈಕೋರ್ಟ್‌ನ ನ್ಯಾ.ಎಂ.ನಾಗಪ್ರಸನ್ನ ಅವರ ಏಕಸದಸ್ಯ ಪೀಠ ತಡೆ ನೀಡಿದೆ.
ಜ.13ಕ್ಕೆ ವಿಚಾರಣಾಧೀನ ಕೋರ್ಟ್‌ನಲ್ಲಿ ಆರೋಪ ನಿಗದಿಗೆ ನಿಗದಿಯಾಗಿತ್ತು. ಇದೀಗ ಹೈಕೋರ್ಟ್ ಆದೇಶದಿಂದ ಪ್ರಜ್ವಲ್‌ಗೆ ರಿಲೀಫ್ ಸಿಕ್ಕಿದೆ. ಮುಂದಿನ ಆದೇಶದವರೆಗೆ ಆರೋಪ ನಿಗದಿ ಮಾಡದಂತೆ ಹೈಕೋರ್ಟ್ ಸೂಚನೆ ನೀಡಿ ಜ.16ಕ್ಕೆ ವಿಚಾರಣೆಯನ್ನು ಮುಂದೂಡಿದೆ.
ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ಹೈಕೋರ್ಟ್‌ನಿಂದ ತಾತ್ಕಾಲಿಕ ರಿಲೀಫ್
RELATED ARTICLES