ಧರ್ಮಸ್ಥಳದಲ್ಲಿ ಭಗವಾನ್ ಬಾಹುಬಲಿ ಮೂರ್ತಿಯ ಪ್ರತಿಷ್ಠಾಮಹೋತ್ಸವದ ನಲ್ವತ್ತನಾಲ್ಕನೆ ವರ್ಧಂತ್ಯುತ್ಸವ

0
17

ಧರ್ಮಸ್ಥಳದಲ್ಲಿ ರತ್ನಗಿರಿಯಲ್ಲಿ ಸೋಮವಾರ ತೋರಣಮುಹೂರ್ತ ಮೊದಲಾದ ಧಾರ್ಮಿಕ ವಿಧಿ-ವಿಧಾನಗಳು  ನಡೆದವು.

ಉಜಿರೆ: ಧರ್ಮಸ್ಥಳದಲ್ಲಿ ರತ್ನಗಿರಿಯಲ್ಲಿ ಭಗವಾನ್ ಬಾಹುಬಲಿಮೂರ್ತಿಯ ಪ್ರತಿಷ್ಠಾಪಕರು ಹಾಗೂ ಧರ್ಮಾಧಿಕಾರಿಗಳಾದ ಪೂಜ್ಯ ಡಿ. ವೀರೇಂದ್ರ ಹೆಗ್ಗಡೆಯವರ ನೇತೃತ್ವದಲ್ಲಿ ಪ್ರತಿಷ್ಠಾ ಮಹೋತ್ಸವದ ನಲ್ವತ್ತನಾಲ್ಕನೆ ವರ್ಧಂತ್ಯುತ್ಸವದ ಅಂಗವಾಗಿ ಸೋಮವಾರ ಪೂರ್ವಾಹ್ನ ಒಂಭತ್ತು ಗಂಟೆಯಿಂದ ತೋರಣಮುಹೂರ್ತ, ವಿಮಾನಶುದ್ಧಿ, ಷೋಡಶ ಕಲಶಾಭಿಷೇಕ ಮೊದಲಾದ ಧಾರ್ಮಿಕ ವಿಧಿ-ವಿಧಾನಗಳು ನಡೆದವು.

ಅಪರಾಹ್ನ ನಾಲ್ಕು ಗಂಟೆಯಿಂದ ನಾಂದಿಮಂಗಲ ಕಾರ್ಯಕ್ರಮ ನಡೆಯಿತು. ಪೂಜ್ಯ 105 ಲ್ಲಕ ನಿರ್ವಾಣಸಾಗರ ಮಹಾರಾಜರು ಉಪಸ್ಥಿತರಿದ್ದರು.

ಹೇಮಾವತಿ ವೀ. ಹೆಗ್ಗಡೆಯವರು, ಡಿ. ಹರ್ಷೇಂದ್ರ ಕುಮಾರ್ ಕಾರ್ಯಕ್ರಮದಲ್ಲಿ ಭಾಗವಹಿಸಿದರು. ಇಂದು ಪಾದಾಭಿಷೇಕ : ಮಂಗಳವಾರ ಬೆಳಿಗ್ಯೆ ಭವ್ಯ 8-30 ರಿಂದ ಬೀಡಿನಿಂದ ರತ್ನಗಿರಿಗೆ ಅಗ್ರೋದಕ ಮೆರವಣಿಗೆ ಬಳಿಕ 216 ಕಲಶಗಳಿಂದ ಭಗವಾನ್ ಬಾಹುಬಲಿಸ್ವಾಮಿ ಮೂರ್ತಿಗೆ ಪಾದಾಭಿಷೇಕ ನಡೆಯುತ್ತದೆ. ಕಾರ್ಕಳ ಜೈನಮಠದ ಪೂಜ್ಯ ಲಲಿಕೀರ್ತಿಭಟ್ಟಾರಕರ ಸ್ವಾಮೀಜಿ ಮಂಗಲಪ್ರವಚನ ನೀಡುವರು.

LEAVE A REPLY

Please enter your comment!
Please enter your name here