ವರದಿ ರಾಯಿ ರಾಜ ಕುಮಾರ
ದಕ್ಷಿಣ ಕನ್ನಡ ಜಿಲ್ಲಾ ಅತಿಕಾರಿಬೆಟ್ಟು ಗ್ರಾಮ ಪಂಚಾಯತ್ ವ್ಯಾಪ್ತಿಯ ಶಿಮಂತೂರು ಪ್ರದೇಶದಲ್ಲಿ ನಿರ್ಮಾಣವಾಗಲಿರುವ ಆಯುಷ್ಮಾನ್ ಆರೋಗ್ಯ ಮತ್ತು ಕ್ಷೇಮ ಕೇಂದ್ರಕ್ಕೆ ಶಿಲನ್ಯಾಸವನ್ನು ಜಿಲ್ಲಾ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು ಜನವರಿ 24ರಂದು ನೆರವೇರಿಸಿದರು.
ಕೇಂದ್ರ ಸರ್ಕಾರದ 65 ಲಕ್ಷ ರೂಪಾಯಿ ಅನುದಾನದಲ್ಲಿ ಈ ಕೇಂದ್ರ ನಿರ್ಮಾಣವಾಗಲಿದೆ. ಈ ಸಂದರ್ಭದಲ್ಲಿ ಸಂಸದರೊಂದಿಗೆ ಸ್ಥಳೀಯ ಶಾಸಕರಾದ ಉಮಾನಾಥ ಕೋಟ್ಯಾನ್, ಸ್ಥಳೀಯ ಮುಂದಾಳುಗಳು ಹಾಗೂ ಇತರ ಗಣ್ಯರು ಹಾಜರಿದ್ದರು.

