ಕಾಪು : ಕಾಪು ವಿಧಾನಸಭಾ ಕ್ಷೇತ್ರದ ಆರೋಗ್ಯ ಸೇವೆಗಳನ್ನು ಮತ್ತಷ್ಟು ಬಲಪಡಿಸುವ ನಿಟ್ಟಿನಲ್ಲಿ ಕಾಪು ಪ್ರಾಥಮಿಕ ಆರೋಗ್ಯ ಕೇಂದ್ರದ ಆವರಣದಲ್ಲಿ 30 ಹಾಸಿಗೆಗಳ ಸಾಮರ್ಥ್ಯದ ನೂತನ ಕಟ್ಟಡ ನಿರ್ಮಾಣ ಕಾಮಗಾರಿಗೆ ನವೆಂಬರ್ 2ರಂದು ಶಂಕುಸ್ಥಾಪನೆ ನೆರವೇರಲಿದೆ.
ಜಿಲ್ಲಾಡಳಿತ ಉಡುಪಿ, ಜಿಲ್ಲಾ ಪಂಚಾಯತ್ ಉಡುಪಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ರಾಷ್ಟ್ರೀಯ ಆರೋಗ್ಯ ಅಭಿಯಾನ ಹಾಗೂ 15ನೇ ಹಣಕಾಸು ಆಯೋಗದ ಸಂಯುಕ್ತ ಆಶ್ರಯದಲ್ಲಿ ಈ ಕಾರ್ಯಕ್ರಮ ಆಯೋಜಿಸಲಾಗಿದೆ.
ನವೆಂಬರ್ 2, 2026ರ ಸೋಮವಾರ ಬೆಳಿಗ್ಗೆ 9 ಗಂಟೆಗೆ ಕಾಪು ಪ್ರಾಥಮಿಕ ಆರೋಗ್ಯ ಕೇಂದ್ರದ ಆವರಣದಲ್ಲಿ ಶಂಕುಸ್ಥಾಪನಾ ಕಾರ್ಯಕ್ರಮ ನಡೆಯಲಿದೆ.

