
ಮೂಡುಬಿದಿರೆ : ಪುತ್ತಿಗೆ ಗ್ರಾಮದ ಪೊಯ್ಯಾಡಿ ಎಂಬಲ್ಲಿ ರಾಧಾ ನಾಯ್ಕರ ಮನೆಗೆ ನಿನ್ನೆ ರಾತ್ರಿ ಸಿಡಿಲು ಬಡಿದು ಹಾನಿಯಾಗಿದೆ. ಘಟನೆಯಿಂದ ಮನೆಯ ವಿದ್ಯುತ್ ಉಪಕರಣಗಳು ಹಾಗೂ ವಿದ್ಯುತ್ ಮೀಟರ್ಗೆ ಹಾನಿಯಾಗಿದ್ದು, ಮನೆಯ ನಾಲ್ಕು ಸಿಮೆಂಟ್ ಶೀಟ್ಗಳು ಸಂಪೂರ್ಣ ಹುಡಿಹುಡಿಯಾಗಿ ಕೆಳಗೆ ಬಿದ್ದಿವೆ.
ಘಟನಾ ಸ್ಥಳಕ್ಕೆ ಅಕ್ರಮ ಸಕ್ರಮ ಸಮಿತಿಯ ಸದಸ್ಯ ವಾಸುದೇವ ನಾಯಕ್, ಪುತ್ತಿಗೆ ಗ್ರಾಮ ಪಂಚಾಯಿತಿ ಮಾಜಿ ಸದಸ್ಯ ಜಯಕುಮಾರ್ ನಾಯ್ಕ್ ಭೇಟಿ ನೀಡಿ ಪರಿಶೀಲಿಸಿದರು. ಸಂಬಂಧಪಟ್ಟ ಅಧಿಕಾರಿಗಳಿಗೆ ಘಟನೆಯ ಕುರಿತು ಮಾಹಿತಿ ನೀಡಿದರು.
