ಶ್ರೀನಗರ: ಇಲ್ಲಿಂದ ಹೊರವಲಯದ ಝೀಲಂ ನದಿಯಲ್ಲಿ ದೋಣಿಯೊಂದು ಮುಳುಗಿ ನಾಲ್ಕು ಮಂದಿ ಸಾವನ್ನಪ್ಪಿದ್ದು, ಹಲವರು ನಾಪತ್ತೆಯಾಗಿದ್ದಾರೆ. ನಾಪತ್ತೆಯಾದವರಲ್ಲಿ ವಿದ್ಯಾರ್ಥಿಗಳೂ ಸೇರಿದ್ದಾರೆ.
ಸ್ಥಳಕ್ಕೆ ಧಾವಿಸಿದ ಎನ್ ಡಿ ಆರ್ ಎಫ್ ಸಿಬ್ಬಂದಿ ರಕ್ಷಣಾ ಕಾರ್ಯಾಚರಣೆಯಲ್ಲಿ ನಿರತರಾಗಿದ್ದಾರೆ. ಕಳೆದೆರಡು ದಿನಗಳಿಂದ ಈ ಭಾಗದಲ್ಲಿ ನಿರಂತರ ಮಳೆ ಸುರಿಯುತ್ತಿದೆ. ಹೀಗಾಗಿ ನದಿಯಲ್ಲಿನ ಹರಿವು ತೀವ್ರಗೊಂಡಿದ್ದು, ದೋಣಿ ದುರಂತಕ್ಕೆ ಇದು ಕಾರಣ ಎಂದು ಅಂದಾಜಿಸಲಾಗಿದೆ. ಹತ್ತರಿಂದ ಹನ್ನೆರಡು ವಿದ್ಯಾರ್ಥಿಗಳು ಸೇರಿದಂತೆ ಹಲವು ಮಂದಿ ದೋಣಿಯಲ್ಲಿ ಪ್ರಯಾಣಿಸುತ್ತಿದ್ದರು ಎನ್ನಲಾಗಿದೆ. ದೋಣಿಯಲ್ಲಿ ಎಷ್ಟು ಮಂದಿ ಇದ್ದರು ಎಂಬುದು ನಿಖರತೆಯಿಲ್ಲ. ರಕ್ಷಣಾ ಕಾರ್ಯ ಭರದಿಂದ ಸಾಗಿದೆ.
ನದಿಯಲ್ಲಿ ದೋಣಿ ಮುಳುಗಿ ನಾಲ್ಕು ಸಾವು; ಹಲವರು ನಾಪತ್ತೆ
RELATED ARTICLES