ನೀರುಮಾರ್ಗ : ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ (ನಿ) ನೀರುಮಾರ್ಗ ಶಾಖೆಯ ಚತುರ್ಥ ವಾರ್ಷಿಕೋತ್ಸವ ಹಾಗೂ ಗ್ರಾಹಕರ ಸಭೆಯು ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಶ್ರೀ ಚಿತ್ತರಂಜನ್ ಬೋಳಾರ್ ರವರ ಅಧ್ಯಕ್ಷತೆಯಲ್ಲಿ ನೀರುಮಾರ್ಗ ಶಾಖೆಯಲ್ಲಿ ಜರುಗಿತು.
ಸಂಘದ ಗ್ರಾಹಕರುಗಳಾದ ಪುಟ್ಟಸ್ವಾಮಿ ಎಚ್. ಶ್ರೀಧರ, ರಾಜೇಶ್, ಶಶಿಪ್ರಭಾ ಹಾಗೂ ನಾರಾಯಣ ಪೂಜಾರಿ ರವರು ದೀಪ ಪ್ರಜ್ವಲನೆ ಮಾಡುವುದರ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು.
ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಸಂಘದ ಸದಸ್ಯರಾದ ಪುಟ್ಟಸ್ವಾಮಿ ಎಚ್. ರವರು “ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘವು ನೀರುಮಾರ್ಗ ಪರಿಸರದಲ್ಲಿರುವ ಉತ್ತಮ ಸೊಸೈಟಿ ಆಗಿದ್ದು, ಇಲ್ಲಿನ ಜನರ ಅಚ್ಚುಮೆಚ್ಚಿನ ಸೊಸೈಟಿ ಆಗಿದೆ” ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
ಸದಸ್ಯರಾದ ಶಶಿಪ್ರಭಾ ರವರು ಮಾತನಾಡಿ “ಸಹಕಾರಿ ಕ್ಷೇತ್ರದಲ್ಲಿ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘವು ಸೇವಾ ಮನೋಭಾವದ ಸಿಬ್ಬಂದಿಯಿಂದ ಉನ್ನತ ಸ್ಥಾನಕ್ಕೆ ಏರುವುದರಲ್ಲಿ ಎರಡು ಮಾತಿಲ್ಲ” ಎಂದು ಶ್ಲಾಘಿಸಿದರು.
ಸದಸ್ಯರಾದ ಪ್ರಮೀಳಾ ಸದಾಶಿವ ಶೆಟ್ಟಿ ರವರು ಮಾತನಾಡಿ “ಸಂಘದ ಶಾಖೆಗಳಲ್ಲಿ ಸಿಬ್ಬಂದಿಗಳ ಸಹಕಾರವು ಅತ್ಯುತ್ತಮವಾಗಿದ್ದು. ದೈನಂದಿನ ವ್ಯವಹಾರಕ್ಕೆ ತುಂಬಾ ಉಪಯುಕ್ತ ಸಂಘವಾಗಿದೆ” ಎಂದು ಮೆಚ್ಚುಗೆ ವ್ಯಕ್ತ ಪಡಿಸಿದರು.
ಅಧ್ಯಕ್ಷತೆ ವಹಿಸಿದ್ದ ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಚಿತ್ತರಂಜನ್ ಬೋಳಾರ್ ರವರು ಮಾತನಾಡಿ “ಗ್ರಾಹಕರ ಪ್ರೋತ್ಸಾಹದಿಂದ ಸಂಘವು ಉತ್ತಮ ಪ್ರಗತಿಯನ್ನು ಹೊಂದಲು ಸಾಧ್ಯವಾಗಿದೆ. ಸಂಘವು ಕೇವಲ ಬ್ಯಾಂಕಿಂಗ್ ಮಾತ್ರವಲ್ಲದೆ, ವಿವಿಧ ಸಾಮಾಜಿಕ ಕಾರ್ಯಗಳಲ್ಲಿ ತೊಡಗಿಸಿಕೊಂಡಿದೆ. ಜೊತೆಯಲ್ಲಿ ಸದಸ್ಯರ ಆರೋಗ್ಯದ ಕಾಳಜಿಯಿಂದ ನಿರಂತರವಾಗಿ ವೈದ್ಯಕೀಯ ಶಿಬಿರಗಳನ್ನು ಆಯೋಜಿಸುತ್ತಾ ಬರುತ್ತಿದೆ.
ಸಂಘದ ಸದಸ್ಯರಿಗೆ ಸ್ಮರ್ಧಾತ್ಮಕ ದರದಲ್ಲಿ ವಿಮಾ ಸೌಲಭ್ಯಗಳನ್ನು ನೀಡುತ್ತಿದೆ. ನೀರುಮಾರ್ಗ ಶಾಖೆಯ ಚತುರ್ಥ ವಾರ್ಷಿಕೋತ್ಸವ ಪ್ರಯುಕ್ತ 500 ದಿನಗಳ ಠೇವಣಿಗಳಿಗೆÂ ವಿಶೇಷ ಬಡ್ಡಿ ದರ ಶೇ. 10 ಹಾಗೂ 1000 ದಿನಗಳ ಠೇವಣಿಗಳಿಗೆ ವಿಶೇಷ ಬಡ್ಡಿ ದರ ಶೇ. 10.50 ವನ್ನು ನೀಡಲಾಗುತ್ತಿದ್ದು, ಚಿನ್ನಾಭರಣ ಸಾಲಗಳಿಗೆ ಪ್ರತಿ ಗ್ರಾಂ ಗೆ ಗರಿಷ್ಟ ಮೌಲ್ಯ ರೂ. 12,000/- ರವರೆಗೆ ಯಾವುದೇ ಸೇವಾ ಶುಲ್ಕವಿಲ್ಲದೆ ಸಾಲವನ್ನು ಸದಸ್ಯರಿಗೆ ನೀಡಲಾಗುವುದು” ಎಂದರು.
ಈ ಕಾರ್ಯಕ್ರಮದಲ್ಲಿ ಸಂಘದ ನಿರ್ದೇಶಕರಾದ ಗೋಪಾಲ್ ಎಮ್, ಮುಖ್ಯಕಾರ್ಯನಿರ್ವಹಣಾಧಿಕಾರಿಯಾದ ಸೌಮ್ಯ ವಿಜಯ್ ಮತ್ತಿತರರರು ಉಪಸ್ಥಿತರಿದ್ದರು.
ಶಾಖೆಯ ಸಿಬ್ಬಂದಿಯಾದ ಕುಮಾರಿ ಅನುಜಿತ ರವರು ಸ್ವಾಗತಿಸಿ, ಸಿಬ್ಬಂದಿಯಾದ ಸುಮಲತಾ ರವರು ವಂದಿಸಿದರು. ಶಾಖೆಯ ಪ್ರಭಾರ ಶಾಖಾಧಿಕಾರಿಯಾದ ವರಣ್ ರಾಜ್ ರವರು ಕಾರ್ಯಕ್ರಮ ನಿರೂಪಿಸಿದರು.

