OLXನಲ್ಲಿ ಕಾರು ಮಾರಾಟದ ಹೆಸರಿನಲ್ಲಿ ಹಣ ಪಡೆದು ವಂಚನೆ

0
73

ಮಂಗಳೂರು: OLXನಲ್ಲಿ ಕಾರು ಮಾರಾಟದ ಹೆಸರಿನಲ್ಲಿ ಹಣ ಪಡೆದು ಬಳಿಕ ವಂಚಿಸಿದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ಬನವಾಸಿ ಸಮೀಪದ ಸೊರಬ ನಿವಾಸಿ ರವಿಚಂದ್ರ ಮಂಜುನಾಥ ರೇವಣಕರ (29) ಬಂಧಿತ ಆರೋಪಿ. ಈತನು OLXನಲ್ಲಿ ಕಾರು ಮಾರಾಟದ ಹೆಸರಿನಲ್ಲಿ 2.50 ಲಕ್ಷ ರೂ. ಪಡೆದು ವಂಚನೆ ಮಾಡಿದ್ದ. ಈ ಬಗ್ಗೆ ಶನಿವಾರ ಸೆನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ತನಿಖೆ ಕೈಗೆತ್ತಿಕೊಂಡ ಪೊಲೀಸರಿಗೆ ಆರೋಪಿಯು ಹೊಸಪೇಟೆಯಲ್ಲಿರುವ ಬಗ್ಗೆ ಮಾಹಿತಿ ತಿಳಿದು ಬಂದಿತ್ತು. ಅದರಂತೆ ಕಾರ್ಯಪ್ರವೃತ್ತರಾದ ಪೊಲೀಸರು ಹೊಸಪೇಟೆಯಿಂದ ಆರೋಪಿಯನ್ನು ಬಂಧಿಸಿದ್ದಾರೆ. ಆರೋಪಿಯು ಬೇರೆ ಬೇರೆ ಬ್ಯಾಂಕ್‌ಗಳಲ್ಲಿ 21 ಖಾತೆಗಳನ್ನು ಹೊಂದಿದ್ದು, 8 ಸಿಮ್ ಕಾರ್ಡ್‌ಗಳು ಬಳಕೆ ಮಾಡಿರುವುದು ತನಿಖೆಯ ವೇಳೆ ತಿಳಿದು ಬಂದಿದೆ.
8 ಮೊಬೈಲ್ ನಂಬಗರ್‌ಳ ಮೇಲೆ 80ಕ್ಕೂ ಹೆಚ್ಚಿನ ಸೈಬರ್ ವಂಚನೆ ದೂರುಗಳು ದಾಖಲಾಗಿದೆ ಎನ್ನಲಾಗಿದೆ. ಆರೋಪಿಯು 3 ವರ್ಷಗಳಿಂದ OLXನಲ್ಲಿ ಕಾರು ಮಾರಾಟದ ಹೆಸರಿನಲ್ಲಿ ಹಣ ಪಡೆದು ವಂಚನೆ ಮಾಡಿರುವುದು ಬೆಳಕಿಗೆ ಬಂದಿದೆ. ತಾನು ಉಪಯೋಗಿಸುತ್ತಿದ್ದ ಮೊಬೈಲನ್ನು ಕೆಲವು ದಿನಗಳ ಬಳಿಕ ಮಾರಾಟ ಮಾಡುತ್ತಿದ್ದು, ಹೊಸ ಸಿಮ್ ಗಳನ್ನು ಬಳಸುತ್ತಿದ್ದ ಎನ್ನಲಾಗಿದೆ.

LEAVE A REPLY

Please enter your comment!
Please enter your name here