ಮೂಡಬಿದಿರೆಯಲ್ಲಿ ಡಿ.14ರಂದು ಉಚಿತ ಕೃತಕ ಕೈಕಾಲು ಜೋಡಣಾ ಶಿಬಿರ

0
4

ಮೂಡಬಿದಿರೆ : “ಮಾನವನ ಸೇವೆಯೇ ಮಾಧವನ ಸೇವೆ” ಎಂಬ ಧ್ಯೇಯವಾಕ್ಯದೊಂದಿಗೆ ಸಮಾಜಮುಖಿ ಕಾರ್ಯಗಳಲ್ಲಿ ತೊಡಗಿಸಿಕೊಂಡಿರುವ ಸ್ವಾಮಿ ವಿವೇಕಾನಂದ ಸೇವಾ ಟ್ರಸ್ಟ್ (ರಿ.), ಕಿನ್ನಿಗೋಳಿ, ದಕ್ಷಿಣ ಕನ್ನಡ ಇದರ ವತಿಯಿಂದ ಉಚಿತ ಕೃತಕ ಕೈಕಾಲು ಜೋಡಣಾ ಶಿಬಿರವನ್ನು ಆಯೋಜಿಸಲಾಗಿದೆ.

ಡಿ.14ರ ಸೋಮವಾರ ಬೆಳಿಗ್ಗೆ 10 ಗಂಟೆಯಿಂದ ಮೂಡಬಿದಿರೆಯ ಸಮಾಜ ಮಂದಿರದಲ್ಲಿ ಶಿಬಿರ ನಡೆಯಲಿದೆ. ಕೃತಕ ಕೈಕಾಲುಗಳ ಅವಶ್ಯಕತೆ ಇರುವ ಅರ್ಹ ಫಲಾನುಭವಿಗಳಿಗೆ ಉಚಿತವಾಗಿ ಕೃತಕ ಕೈಕಾಲು ಜೋಡಣೆ ಮಾಡುವ ಉದ್ದೇಶದಿಂದ ಈ ಶಿಬಿರವನ್ನು ಹಮ್ಮಿಕೊಳ್ಳಲಾಗಿದೆ.

ಶಿಬಿರದ ಪ್ರಯೋಜನ ಪಡೆಯಲಿಚ್ಛಿಸುವವರು ಡಿಸೆಂಬರ್ 10ರೊಳಗೆ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳುವಂತೆ ಸಂಘಟಕರು ತಿಳಿಸಿದ್ದಾರೆ.

ಹೆಚ್ಚಿನ ಮಾಹಿತಿಗಾಗಿ ಹಾಗೂ ಹೆಸರು ನೋಂದಣಿಗಾಗಿ 9844950698 ಅಥವಾ 9448463233 ಸಂಖ್ಯೆಯನ್ನು ಸಂಪರ್ಕಿಸಬಹುದು.

ಸ್ವಾಮಿ ವಿವೇಕಾನಂದ ಸೇವಾ ಟ್ರಸ್ಟ್‌ನ ಅಧ್ಯಕ್ಷರಾದ ಡಾ. ಜಗನ್ನಾಥ ಶೆಟ್ಟಿ ನಿಡೋಡಿ ಚಾವಡಿಮನೆ ಹಾಗೂ ಟ್ರಸ್ಟಿಗಳು, ಸಂಚಾಲಕರು ಮತ್ತು ಸರ್ವಸದಸ್ಯರು ಶಿಬಿರದ ಯಶಸ್ಸಿಗೆ ಸಹಕರಿಸುವಂತೆ ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.