ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಉತ್ತಮ ಗುಣಮಟ್ಟದ ಮೌಲ್ಯಾಧಾರಿತ ಆಧುನಿಕ ವಿದ್ಯಾಭ್ಯಾಸವನ್ನು ನೀಡುವ ಯೋಜನೆಯೊಂದಿಗೆ ಆರಂಭಗೊಂಡ ಅಕ್ಷಯ ಪದವಿಪೂರ್ವ ಕಾಲೇಜಿನಲ್ಲಿ ದಿನಾಂಕ 15 ರಂದು ಉಚಿತ ಬ್ರಿಡ್ಜ್ ಕೋರ್ಸ್ ಮತ್ತು ಸ್ಪೋಕನ್ ಇಂಗ್ಲೀಷ್ ತರಗತಿಗಳ ಉದ್ಘಾಟನೆ ವಿದ್ಯುಕ್ತವಾಗಿ ನೆರವೇರಿತು.

ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅಕ್ಷಯ ಸಮೂಹ ಶಿಕ್ಷಣ ಸಂಸ್ಥೆಯ ಅಧ್ಯಕ್ಷರಾದ ಜಯಂತ್ ನಡುಬೈಲು ಅವರು , ಅಕ್ಷಯ ಪದವಿಪೂರ್ವ ಕಾಲೇಜು ವಿದ್ಯಾರ್ಥಿಗಳಲ್ಲಿರುವ ಕ್ರಿಯಾಶೀಲತೆಯನ್ನು ಹೆಚ್ಚಿಸಿ ಅವರ ಭವಿಷ್ಯಕ್ಕೆ ಭದ್ರಬುನಾದಿಯನ್ನು ಒದಗಿಸುವ ನಿಟ್ಟಿನಲ್ಲಿ ಉಚಿತ ತರಬೇತಿಗಳನ್ನು ನೀಡುವ ಮೂಲಕ ಶೈಕ್ಷಣಿಕವಾಗಿ ಹೊಸ ಸಾಧನೆಯ ಹೆಜ್ಜೆ ಗುರುತುಗಳನ್ನು ಮೂಡಿಸಿದೆ ಎಂದರು.
ಅಕ್ಷಯ ಸಮೂಹ ಶಿಕ್ಷಣ ಸಂಸ್ಥೆಯ ಅಕಾಡೆಮಿಕ್ ಡೈರೆಕ್ಟರ್ ಅಭಿಲಾಷ್ ಕ್ಷತ್ರಿಯ ಮಾತನಾಡಿ ದೊಡ್ಡ ನಗರಗಳಲ್ಲಿ ಮಾತ್ರ ಸಿಗುವ ಉಚಿತ ತರಬೇತಿ ಸೌಲಭ್ಯಗಳನ್ನು ನಾವು ನೀಡುತ್ತಿದ್ದೇವೆ.ಇದರಿಂದ ವಿದ್ಯಾರ್ಥಿಗಳ ಆತ್ಮವಿಶ್ವಾಸ ಹೆಚ್ಚಾಗಿ ಅವರ ಮುಂದಿನ ಹಂತದ ವಿದ್ಯಾಭ್ಯಾಸ ಸುಲಭವಾಗುತ್ತದೆ ಎಂದರು.

ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲೆ ಗಂಗಾರತ್ನ ಮಾತನಾಡಿ ವಿದ್ಯಾರ್ಥಿಗಳು ತಮ್ಮೆದುರು ತರೆದುಕೊಳ್ಳುವ ಅತ್ಯುತ್ತಮ ಅವಕಾಶಗಳನ್ನು ಉಪಯೋಗಿಸಿಕೊಳ್ಳಬೇಕು ಎಂದರು.ಸಂಸ್ಥೆಯ ಆಡಳಿತಾಧಿಕಾರಿ ಶ್ರೀ ಅರ್ಪಿತ್ ಟಿ ಎ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು.
ಈ ಕಾರ್ಯಕ್ರಮದಲ್ಲಿ ಎಲ್ಲ ಶಿಕ್ಷಕ-ಶಿಕ್ಷಕೇತರ ಸಿಬ್ಬಂದಿ ವರ್ಗದವರು ಹಾಗೂ ಪೋಷಕರು ಉಪಸ್ಥಿತರಿದ್ದರು.

