ಬೆಂಗಳೂರು: ಉಚಿತ ಪ್ರಯಾಣದ ಭಾಗ್ಯ ಸರ್ಕಾರಿ ಮಕ್ಕಳಿಗೂ ಸಿಕ್ಕಿದೆ. ಕೆಪಿಎಸ್ ಸರ್ಕಾರಿ ಶಾಲೆಯಲ್ಲಿ ಎಲ್ಕೆಜಿ ಯಿಂದ ಪಿಯುಸಿ ತನಕ ಓದುವ ವಿದ್ಯಾರ್ಥಿಗಳಿಗೆ ಸರ್ಕಾರ ಉಚಿತ ಸಾರಿಗೆ ಸೌಲಭ್ಯವನ್ನು ಘೋಷಿಸಿದೆ. ಈ ಬಗ್ಗೆ ಡಿಸಿಎಂ ಡಿಕೆ ಶಿವಕುಮಾರ್ ಅವರು ಸೋಶಿಯಲ್ ಮೀಡಿಯಾದ ಎಕ್ಸ್ ಖಾತೆಯಲ್ಲಿ ಪೋಸ್ಟ್ ಹಂಚಿಕೊಂಡಿದ್ದಾರೆ.
ಉಚಿತ ಬಸ್ ವ್ಯವಸ್ಥೆ
ರಾಜ್ಯಾದ್ಯಂತ ಕರ್ನಾಟಕ ಪಬ್ಲಿಕ್ ಶಾಲೆಗಳಲ್ಲಿ ಎಲ್’ಕೆಜಿಯಿಂದ ಪಿಯುಸಿ ತನಕ ಓದುವ ವಿದ್ಯಾರ್ಥಿಗಳಿಗೆ ಉಚಿತ ಬಸ್ ವ್ಯವಸ್ಥೆ ಆರಂಭಿಸಲು ರಾಜ್ಯ ಸರ್ಕಾರ ತೀರ್ಮಾನಿಸುವ ಮೂಲಕ ಸರ್ಕಾರಿ ಶಾಲೆಗಳ ಬಲವರ್ಧನೆಗೆ ಪ್ರಮುಖ ಒತ್ತು ನೀಡಲಾಗುತ್ತಿದೆ. ಈ ಕುರಿತು ಡಿಸಿಎಂ ಡಿ.ಕೆ ಶಿವಕುಮಾರ್ ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಹಂಚಿಕೊಂಡಿದ್ದಾರೆ