ಅಖಿಲ ಭಾರತ ಥೇರಾ ಪಂಥ ಮಹಿಳಾ ಮಂಡಳದಿಂದ ಉಚಿತ ಗರ್ಭಕಂಠ ಕ್ಯಾನ್ಸರ್ ತಪಾಸಣೆ ಮತ್ತು ಚಿಕಿತ್ಸೆ ಅಭಿಯಾನ : 5 ಸಾವಿರ ಮಂದಿಗೆ ತಪಾಸಣೆ

0
7

ಬೆಂಗಳೂರು : ಅಖಿಲ ಭಾರತ ಥೇರಾ ಪಂಥ ಮಹಿಳಾ ಮಂಡಳದ ಆಶ್ರ ಯದಲ್ಲಿ ಬೆಂಗಳೂರಿನ ಗಾಂಧಿನಗರದ ಶಾಖೆಯಿಂದ ವಿಶ್ವ ಕ್ಯಾನ್ಸರ್ ದಿನದ ಹಿನ್ನೆಲೆಯಲ್ಲಿ ಸರ್ವೈಕಲ್ ಕ್ಯಾನ್ಸರ್ ಉಚಿತ ತಪಾಸಣೆ ಮತ್ತು ಚಿಕಿತ್ಸಾ ಅಭಿಯಾನ ಹಮ್ಮಿಕೊಳ್ಳಲಾಗಿತ್ತು.

ಅಖಿಲ ಭಾರತ ಥೇರಾ ಪಂಥ ಮಹಿಳಾ ಮಂಡಳದ ಲಕ್ಷ್ಮೀ ಬೋಹ್ರಾ ಈ ಕುರಿತು ಮಾಹಿತಿ ನೀಡಿ, ಜನ ಸಾಮಾನ್ಯರಿಗೆ ಅನುಕೂಲ ಮಾಡಿಕೊಡುವ ಉದ್ದೇಶದಿಂದ‌ 21 ರಿಂದ 65 ವಯೋಮಿತಿಯವರಿಗೆ ಈ ಅಭಿಯಾನ ನಡೆಯಿತು. ತಪಾಸಣೆ ನಂತರ ಕ್ಯಾನ್ಸರ್ ಇದ್ದವರಿಗೆ ಉಚಿತವಾಗಿ ಶಸ್ತ್ರಚಿಕಿತ್ಸೆ ಒದಿಸುತ್ತಿದ್ದು, ನಗರದ ಜನತೆ ಈ ಸೌಲಭ್ಯವನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದರು.

ನಟಿ ಸಂಜನಾ ಗುರ್ಲಾನಿ ಈ ಕಾರ್ಯಕ್ರಮದ ರಾಯಭಾರಿಯಾಗಿದ್ದಾರೆ. ಒಟ್ಟು 20 ಆಸ್ಪತ್ರೆಗಳಲ್ಲಿ ಉಚಿತ ಚಿಕಿತ್ಸೆ, ನೋಂದಣಿಗೆ ವ್ಯವಸ್ಥೆ ಮಾಡಲಾಗಿತ್ತು ಬೆಂಗಳೂರು ನಗರದಲ್ಲಿ ಉದ್ಯೋಗಸ್ಥ ಮಹಿಳೆರಲ್ಲಿ ಈ ಸಮಸ್ಯೆ ಹೆಚ್ಚಾಗಿದ್ದು, ಅವರಿಗಾಗಿ ಈ ಅಭಿಯಾನ ಹಮ್ಮಿಕೊಳ್ಳಲಾಗಿದೆ. ಸರಳ, ಸುರಕ್ಷಿತ ಮತ್ತು ನೋವು ರಹಿತವಾದ ಪರೀಕ್ಷೆ ಇದಾಗಿದ್ದು, ಸ್ಥಳದಲ್ಲಿಯೇ ತಪಾಸಣೆ ನಡೆಯಲಿದೆ.

ಇತ್ತೀಚೆಗೆ ಸರ್ವೈಕಲ್ ಕ್ಯಾನ್ಸರ್ ಹೆಚ್ಚಾಗುತ್ತಿದೆ. ಇದನ್ನು ಮನಗಂಡು ಕೇಂದ್ರ ಸರ್ಕಾರ ಇದಕ್ಕೆ ವಿಶೇಷ ಲಸಿಕಾ ಅಭಿಯಾನವನ್ನು ಸಹ ಆರಂಭಿಸಿದೆ. ರೋಗವನ್ನು ತಡೆಗಟ್ಟುವ ಜೊತೆಗೆ ಸಮಸ್ಯೆ ಇರುವವರಿಗೆ ಚಿಕಿತ್ಸೆ ದೊರಕಿಸಿಕೊಡಲಾಗುವುದು ಎಂದರು. ಶಿಬಿರದಲ್ಲಿ ಕಾರ್ಯದರ್ಶಿ ವಿಜೇತ ಜೈನ್, ಸಂಚಾಲಕರಾದ ಇಂದು ಕಿನ್ವೇಸರ, ನೀತಾ ಗೋಡಿಯಾ ಮತ್ತಿತರರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here