ಪುತ್ತೂರು : ಪ್ರತಿಭಾವಂತ ಹಾಗೂ ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ಒದಗಿಸುವ ಉದ್ದೇಶದಿಂದ ಪುತ್ತೂರಿನ ವಿವೇಕಾನಂದ ಪದವಿಪೂರ್ವ ಕಾಲೇಜು ‘ಮೇಧಾ–2027’ ಉಚಿತ ಶಿಕ್ಷಣ ಯೋಜನೆಯನ್ನು ಘೋಷಿಸಿದೆ. ಈ ಯೋಜನೆಯಡಿ ಪ್ರವೇಶ ಪರೀಕ್ಷೆ ನಡೆಸಿ ಉತ್ತಮ ಅಂಕ ಗಳಿಸುವ ಅರ್ಹ ವಿದ್ಯಾರ್ಥಿಗಳಿಗೆ ಶೇ.100ರಷ್ಟು ವಿದ್ಯಾರ್ಥಿವೇತನದೊಂದಿಗೆ ಉಚಿತ ಶಿಕ್ಷಣ ಪಡೆಯುವ ಅವಕಾಶ ಕಲ್ಪಿಸಲಾಗಿದೆ.
ಸುಮಾರು ಆರು ದಶಕಗಳ ಸಮೃದ್ಧ ಶೈಕ್ಷಣಿಕ ಪರಂಪರೆಯನ್ನು ಹೊಂದಿರುವ ವಿವೇಕಾನಂದ ವಿದ್ಯಾವರ್ಧಕ ಸಂಘದ ಮೊದಲ ಸಂಸ್ಥೆಯಾದ ವಿವೇಕಾನಂದ ಪದವಿಪೂರ್ವ ಕಾಲೇಜು, ನಗರ ಪ್ರದೇಶಗಳ ಜೊತೆಗೆ ಗ್ರಾಮೀಣ ಹಾಗೂ ಹಿಂದುಳಿದ ಪ್ರದೇಶಗಳ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗೂ ನಿರಂತರವಾಗಿ ಶ್ರಮಿಸುತ್ತಿದೆ.
9 ಪರೀಕ್ಷಾ ಕೇಂದ್ರಗಳಲ್ಲಿ ಏಕಕಾಲದಲ್ಲಿ ಪರೀಕ್ಷೆ
ಕಳೆದ ಎರಡು ಶೈಕ್ಷಣಿಕ ವರ್ಷಗಳಿಂದ ಜಾರಿಯಲ್ಲಿರುವ ಈ ಯೋಜನೆಯ ಪ್ರವೇಶ ಪರೀಕ್ಷೆಯು 2026ರ ಡಿಸೆಂಬರ್ 6ರಂದು ದಕ್ಷಿಣ ಕನ್ನಡ, ಕಾಸರಗೋಡು, ಕೊಡಗು, ಹಾಸನ ಹಾಗೂ ತುಮಕೂರು ಜಿಲ್ಲೆಗಳ ಪರೀಕ್ಷಾ ಕೇಂದ್ರಗಳಲ್ಲಿ ಬೆಳಗ್ಗೆ 10 ಗಂಟೆಗೆ ಏಕಕಾಲದಲ್ಲಿ ನಡೆಯಲಿದೆ.
ಕನ್ನಡ ಮತ್ತು ಆಂಗ್ಲ ಮಾಧ್ಯಮಗಳಲ್ಲಿ ಪರೀಕ್ಷೆ ಬರೆಯಲು ಅವಕಾಶವಿದ್ದು, 9 ಮತ್ತು 10ನೇ ತರಗತಿಯ ಗಣಿತ, ವಿಜ್ಞಾನ ಹಾಗೂ ಸಾಮಾನ್ಯ ಜ್ಞಾನ ವಿಷಯಗಳನ್ನು ಆಧರಿಸಿ 120 ನಿಮಿಷಗಳ ಪರೀಕ್ಷೆ ನಡೆಯಲಿದೆ. ವಿಜ್ಞಾನ, ವಾಣಿಜ್ಯ ಹಾಗೂ ಕಲಾ ವಿಭಾಗಗಳಲ್ಲಿ ಪದವಿಪೂರ್ವ ಶಿಕ್ಷಣ ಪಡೆಯಲು ಆಸಕ್ತಿ ಹೊಂದಿರುವ ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಬಹುದು.
ಪರೀಕ್ಷಾ ಕೇಂದ್ರಗಳ ವಿವರ
- ಪುತ್ತೂರು: ವಿವೇಕಾನಂದ ಪದವಿಪೂರ್ವ ಕಾಲೇಜು, ವಿವೇಕಾನಂದ ಆವರಣ, ನೆಹರು ನಗರ.
- ಕಡಬ: ಸರಸ್ವತಿ ಪ್ರೌಢಶಾಲೆ, ವಿದ್ಯಾನಗರ, ಪಂಜ ರಸ್ತೆ.
- ವಿಟ್ಲ: ಪಿ.ಎಂ. ಶ್ರೀ ಸರಕಾರಿ ಪ್ರೌಢಶಾಲೆ, ಸಾಲೆತ್ತೂರು ರಸ್ತೆ.
- ಬಿ.ಸಿ.ರೋಡ್: ಬೆಸ್ಟ್ ಆಂಗ್ಲ ಮಾಧ್ಯಮ ಶಾಲೆ.
- ಸುಳ್ಯ: ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆ, ವಿನೋಬನಗರ, ಜಾಲ್ಲೂರು.
- ಬದಿಯಡ್ಕ: ಶ್ರೀ ಭಾರತಿ ವಿದ್ಯಾಪೀಠ, ಕಾಸರಗೋಡು ಜಿಲ್ಲೆ.
- ಮಡಿಕೇರಿ: ಜನರಲ್ ತಿಮ್ಮಯ್ಯ ಪಬ್ಲಿಕ್ ಸ್ಕೂಲ್.
- ಸಕಲೇಶಪುರ: ರೋಟರಿ ಇಂಗ್ಲಿಷ್ ಸ್ಕೂಲ್.
- ತುಮಕೂರು: ಚೇತನ ವಿದ್ಯಾಮಂದಿರ ಪ್ರೌಢಶಾಲೆ, ಸರ್ವೋದಯ ಶಿಕ್ಷಣ ಸಂಸ್ಥೆ.
ನ.30 ನೋಂದಣಿಗೆ ಕೊನೆಯ ದಿನ
ಪ್ರವೇಶ ಪರೀಕ್ಷೆಗೆ ನೋಂದಾಯಿಸಲು ನವೆಂಬರ್ 30 ಕೊನೆಯ ದಿನವಾಗಿದೆ. ಆಸಕ್ತ ವಿದ್ಯಾರ್ಥಿಗಳು ಕಾಲೇಜಿನ ಅಧಿಕೃತ ವೆಬ್‌ಸೈಟ್ ಮೂಲಕ ಅರ್ಜಿ ಸಲ್ಲಿಸಬಹುದು.
ನೋಂದಣಿ ಲಿಂಕ್: www.vivekanandapuc.com/medha
ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ:
- 8971924424
- 8105072386
- 8073700468
ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಆರ್ಥಿಕ ಅಡಚಣೆಯಿಲ್ಲದೆ ಉನ್ನತ ಶಿಕ್ಷಣ ಪಡೆಯಲು ನೆರವಾಗುವ ಈ ಯೋಜನೆಯ ಸದುಪಯೋಗವನ್ನು ವಿದ್ಯಾರ್ಥಿಗಳು ಪಡೆದುಕೊಳ್ಳುವಂತೆ ಕಾಲೇಜು ಪ್ರಕಟಣೆ ತಿಳಿಸಿದೆ.
