ದಾವಣಗೆರೆ-ಜನವರಿ,ದಾವಣಗೆರೆ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಮತ್ತು ಕಲಾಕುಂಚ ವಿದ್ಯಾನಗರ ಶಾಖೆಯ ಸಂಯುಕ್ತಾಶ್ರಯದಲ್ಲಿ ಜನವರಿ 4 ರಂದು ಭಾನುವಾರ ಬೆಳಿಗ್ಗೆ 10 ಗಂಟೆಗೆ ನಗರದ ಜಯದೇವ ವೃತ್ತದ ಹತ್ತಿರವಿರುವ ಪಿ.ಜೆ. ಬಡಾವಣೆಯ ಡಿ.ಆರ್.ಎಂ.ಸ್ಕೌಟ್ ಭವನದ ಸಭಾಂಗಣದಲ್ಲಿ 2025-26 ನೇ ಸಾಲಿನ ಎಸ್.ಎಸ್.ಎಲ್.ಸಿ. ಪರೀಕ್ಷೆ ಎದುರಿಸುವ ಮಕ್ಕಳಿಗೆ ಉಚಿತ ಕಾರ್ಯಾಗಾರವನ್ನು ಹಮ್ಮಿಕೊಳ್ಳಲಾಗಿದೆ ಎಂದು ಕಲಾಕುಂಚ ಪ್ರಧಾನ ಕಾರ್ಯದರ್ಶಿ ಕೆ.ಸಿ.ಉಮೇಶ್ ತಿಳಿಸಿದ್ದಾರೆ.
ಸಮಾರಂಭದ ಉದ್ಘಾಟನೆಯನ್ನು ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ದಾವಣಗೆರೆ ಜಿಲ್ಲಾ ಮುಖ್ಯ ಆಯುಕ್ತರಾದ ಮುರುಘ ರಾಜೇಂದ್ರ ಜೆ. ಚಿಗಟೇರಿಯವರು ನೆರವೇರಿಸಲಿದ್ದಾರೆ. ಸಮಾರಂಭದ ಅಧ್ಯಕ್ಷತೆಯನ್ನು ಕಲಾಕುಂಚದ ಅಧ್ಯಕ್ಷರಾದ ಕೆ.ಹೆಚ್.ಮಂಜುನಾಥ್ ವಹಿಸಿಕೊಳ್ಳಲಿದ್ದಾರೆ.
ಕಲಾಕುಂಚದ ಸಂಸ್ಥಾಪಕರಾದ ಸಾಲಿಗ್ರಾಮ ಗಣೇಶ್ ಶೆಣೈ ವಹಿಸಿಕೊಂಡು ಮಕ್ಕಳಿಗೆ ಧೈರ್ಯ ತುಂಬುವ ಉಚಿತ ಕಾರ್ಯಾಗಾರ ನಡೆಸಿಕೊಡಲಿದ್ದಾರೆ. ವೇದಿಕೆಯಲ್ಲಿ ಕಲಾಕುಂಚ ಮಹಿಳಾ ವಿಭಾಗದ ಸಂಸ್ಥಾಪಕರಾದ ಜ್ಯೋತಿ ಗಣೇಶ್ ಶೆಣೈ , ಕಲಾಕುಂಚ ಮಹಿಳಾ ವಿಭಾಗದ ಅಧ್ಯಕ್ಷರಾದ ಹೇಮಾ ಶಾಂತಪ್ಪ ಪೂಜಾರಿ, ಗೌರವ ಅಧ್ಯಕ್ಷರಾದ ವಸಂತಿ ಮಂಜುನಾಥ್ ವೇದಿಕೆಯಲ್ಲಿ ಗೌರವ ಉಪಸ್ಥಿತರಿರುತ್ತಾರೆ.
2025-26 ನೇ ಸಾಲಿನ ಎಸ್.ಎಸ್.ಎಲ್.ಸಿ. ಓದುವ ಮಕ್ಕಳು, ಪೋಷಕರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಈ ಉಚಿತ ಕಾರ್ಯಾಗಾರ ಯಶಸ್ವಿಗೊಳಿಸಬೇಕಾಗಿ ಕಲಾಕುಂಚದ ಕೆ.ಬಿ. ಬಡಾವಣೆಯ ಶಾಖೆಯ ಅಧ್ಯಕ್ಷರಾದ ವಿ.ಕೃಷ್ಣಮೂರ್ತಿ ವಿನಂತಿಸಿದ್ದಾರೆ.
