ಕವತಾರು, ಮುಲ್ಕಿ ಲಯನ್ಸ್ ಕ್ಲಬ್ ಬಪ್ಪನಾಡು ಇನ್ಸ್‌ಫಯರ್ ವತಿಯಿಂದ 20.10.204 ರಂದು ಜರಗಿದ ಬೃಹತ್ ಆರೋಗ್ಯ ಶಿಬಿರ, ನೇತ್ರ ಚಿಕಿತ್ಸಾ ಶಿಬಿರ ಹಾಗೂ ದಂತ ಶಿಬಿರ ಕಾರ್ಯಕ್ರಮದಲ್ಲಿ ಕಣ್ಣಿನ ಪರೀಕ್ಷೆ ಜರಗಿ ಅರ್ಹ ಫಲಾನುಭವಿಗಳಿಗೆ ಉಚಿತ ಕನ್ನಡಕ ನೀಡುವರೇ ಈ ದಿನ ಕವತಾರುಶ್ರೀ ವಿಷ್ಣುಮೂರ್ತಿ ದೇವಸ್ಥಾನದ ಅಂಗಳದಲ್ಲಿ ಸುಮಾರು 68 ಫಲಾನುಭವಿಗಳಿಗೆ ಕನ್ನಡಕಗಳ ವಿತರಣೆಯನ್ನು ನಡೆಸಲಾಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಲಯನ್ಸ್ ಕ್ಲಬ್ ಬಪ್ಪನಾಡು ಇನ್ಸ ಫಯರ್ ಅಧ್ಯಕ್ಷರಾದ ಬಿ ಶಿವಪ್ರಸಾದ್ ವಹಿಸಿ ಗ್ರಾಮೀಣ ಪ್ರದೇಶದ ಜನರ ಕಣ್ಣಿನ ಹಾಗೂ ಇತರ ಆರೋಗ್ಯ ಸಮಸ್ಯೆಗಳಿಗೆ ನೆರವಾಗುವ ನಿಟ್ಟಿನಲ್ಲಿ ಆರೋಗ್ಯ ಶಿಬಿರಗಳನ್ನು ಜರುಗಿಸಿ ಈ ದಿನ ಉಚಿತ ಕನ್ನಡಕ ವಿತರಣೆ ಕಾರ್ಯಕ್ರಮವನ್ನು ಆಯೋಜಿಸಿದ್ದೇವೆ ನಮ್ಮ ಇಂತಹ ಶಿಬಿರಗಳ ಪ್ರಯೋಜನವನ್ನು ಗ್ರಾಮೀಣ ಪ್ರದೇಶದ ಜನರು ಪಡೆದುಕೊಳ್ಳಬೇಕಾಗಿ ಕರೆ ನೀಡಿದರು ಕಾರ್ಯಕ್ರಮದಲ್ಲಿ ನಿಕಟಪೂರ್ವ ಅಧ್ಯಕ್ಷರಾದ ಸುದಿರ್ ಬಾಳಿಗ ಕೋಶಾಧಿಕಾರಿ ಅನಿಲ್ ಕುಮಾರ್ ಪ್ರಾಂತ್ಯ ಅಧ್ಯಕ್ಷರಾದ ವೆಂಕಟೇಶ ಹೆಬ್ಬಾರ್ ಆಶೋಕ್ ಭಂಡಾರಿ ಪ್ರೀತಂ ರೈ ಮೊದಲಾದವರು ಉಪಸ್ಥಿತರಿದ್ದರು.