ಮೂಡುಬಿದಿರೆಯಲ್ಲಿ ಮಹಿಳೆಯರಿಗಾಗಿ ಉಚಿತ ಫ್ಯಾಷನ್ ಡಿಸೈನ್ ತರಬೇತಿ ಉದ್ಘಾಟನೆ

0
27

ಮೂಡುಬಿದಿರೆ: ಯುವವಾಹಿನಿ (ರಿ) ಮೂಡಬಿದರೆ ಘಟಕ ಭಾರತೀಯ ವಿಕಾಸ ಟ್ರಸ್ಟ್ ಮಣಿಪಾಲ, ಹಾಗೂ ನೋಮಿ ಯೋಜನೆ ಪ್ರಾಯೋಜಕತ್ವದಲ್ಲಿ , ವಿಚೀಸ್ ಕೌಶಲ್ಯ ಕೇಂದ್ರ ಮೂಡುಬಿದಿರೆ ಇವರ ಸಹಕಾರದೊಂದಿಗೆ 15 ದಿನಗಳ ಉಚಿತ ಫ್ಯಾಷನ್ ಡಿಸೈನ್ ತರಬೇತಿ ದಿನಾಂಕ 12/05/2026ನೇ ಮಂಗಳವಾರ ದಂದು ಸಮಾಜ ಮಂದಿರದಲ್ಲಿ ಉದ್ಘಾಟನೆಗೊಂಡಿತು..

ಯುವವಾಹಿನಿ (ರಿ) ಮೂಡಬಿದರೆ ಘಟಕದ ಅಧ್ಯಕ್ಷರಾದ ಶ್ರೀ ಗಿರೀಶ್ ಕೋಟ್ಯಾನ್ ರವರು ತರಬೇತಿಯನ್ನು ಉದ್ಘಾಟನೆ ಮಾಡಿ ಮಾತನಾಡಿ ಮಹಿಳೆಯರು ಹೆಚ್ಚಿನ ಕೌಶಲ್ಯ ಕಲಿತು ತಮ್ಮನ್ನು ತಾವು ಸ್ವ ಉದ್ಯೋಗದಲ್ಲಿ ತೊಡಗಿಸಿಕೊಳ್ಳಲು ಕರೆ ನೀಡಿದರು.

ಭಾರತೀಯ ವಿಕಾಸ ಟ್ರಸ್ಟ್ ಕಾರ್ಯಕ್ರಮ ವ್ಯವಸ್ಥಾಪಕರಾದ ಜೀವನ್ ಕೊಲ್ಯ ತರಬೇತಿಯ ಮುಖ್ಯ ಉದ್ದೇಶ, ನಿಯಮಗಳ ಬಗ್ಗೆ ವಿವರಿಸಿದರು.

ಕೆನರಾ ಬ್ಯಾಂಕ್ ಅಮೂಲ್ಯ ಆರ್ಥಿಕ ಸಾಕ್ಷರತಾ ಯೋಜನೆಯ ಸಮಾಲೋಚಕರಾದ ಲತೀಶ್ ಸ್ವ ಉದ್ಯೋಗ ಮಾಡಲು ಬ್ಯಾಂಕ್ನಲ್ಲಿ ಸಿಗುವ ಸಾಲ ಸೌಲಭ್ಯ ಹಾಗೂ ವಿಮಾ ಯೋಜನೆಗಳ ಬಗ್ಗೆ ಮಾಹಿತಿ ನೀಡಿದರು.

ಕಾರ್ಯಕ್ರಮದಲ್ಲಿ ಯುವವಾಹಿನಿ (ರಿ.)ಮೂಡಬಿದಿರೆ ಘಟಕದ ಕೋಶಾಧಿಕಾರಿ ಜಯಶೀಲಾ ಎಸ್ ಪೂಜಾರಿ,ಸಂಘಟನಾ ಕಾರ್ಯದರ್ಶಿಗಳಾದ ಅಶೋಕ್ ಕೇಮಾರ್, ಪ್ರಸಾದ್ ಸುವರ್ಣ ಪುತ್ತಿಗೆ ತರಬೇತುದಾರರಾದ ಅನಿತ ಆನಂದ್ ಒಂಟಿಕಟ್ಟೆ ಇವರುಗಳು , ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ 27 ಮಹಿಳೆಯರು ಈ ತರಬೇತಿಯಲ್ಲಿ ಭಾಗವಹಿಸುತ್ತಿದ್ದಾರೆ.

ವೀಚೀಶ್ ಕೌಶಲ್ಯಪರ ತರಬೇತಿ ಕೇಂದ್ರದ ನಿರ್ದೇಶಕಿ ಶುಭಲಕ್ಷ್ಮಿ ಸ್ವಾಗತಿಸಿ, ಪವಿತ್ರ ಸರಸ್ವತಿ ಕಾರ್ಯಕ್ರಮ ನಿರೂಪಿಸಿದರು.

LEAVE A REPLY

Please enter your comment!
Please enter your name here