ಆ.02ರಂದು ಮುಲ್ಕಿಯಲ್ಲಿ ಉಚಿತ ಆರೋಗ್ಯ ತಪಾಸಣೆ ಶಿಬಿರ

0
9

ಉಚಿತ ಕನ್ನಡಕ ವಿತರಣೆ

ಮುಲ್ಕಿ : ಮುಲ್ಕಿ ಶಾಂಭವಿ ಜೇಸಿ ಟ್ರಸ್ಟ್ (ರಿ) ಹಾಗೂ ರೋಟರಿ ಕ್ಲಬ್ ಮುಲ್ಕಿಯ ಜಂಟಿ ಆಶ್ರಯದಲ್ಲಿ ಆಗಸ್ಟ್ 2ರಂದು (ಭಾನುವಾರ) ಮುಲ್ಕಿಯ ಕಾರ್ನಾಡ್‌ನ ಸಿ.ಎಸ್.ಐ. ಆಂಗ್ಲ ಮಾದ್ಯಮ ಶಾಲೆಯಲ್ಲಿ ಆಯೋಜಿಸಲಾಗಿದೆ.

ಬೆಳಿಗ್ಗೆ 9.00 ರಿಂದ ಮಧ್ಯಾಹ್ನ 12.30ರವರೆಗೆ ನಡೆಯಲಿರುವ ಶಿಬಿರದಲ್ಲಿ ಕೆ.ಎಸ್. ಹೆಗ್ಡೆ ಆಸ್ಪತ್ರೆ, ದೇರಳಕಟ್ಟೆ ಮಂಗಳೂರು ಹಾಗೂ ಎ.ಜೆ. ಇನ್‌ಸ್ಟಿಟ್ಯೂಟ್ ಆಫ್ ಡೆಂಟಲ್ ಸೈನ್ಸಸ್‌ ಕುಂಟಿಕಾನ ಮಂಗಳೂರು ಇವರ ಸಹಕಾರದೊಂದಿಗೆ ಉಚಿತ ಆರೋಗ್ಯ ತಪಾಸಣೆ ಶಿಬಿರ ನಡೆಯಲಿದೆ.

ಶಿಬಿರದಲ್ಲಿ ಕಣ್ಣಿನ ತಪಾಸಣೆ, ದಂತ ತಪಾಸಣೆ, ಚರ್ಮರೋಗ ತಪಾಸಣೆ, ಸಾಮಾನ್ಯ ಆರೋಗ್ಯ ತಪಾಸಣೆ, ಇಸಿಜಿ (ECG), ರಕ್ತದೊತ್ತಡ ಹಾಗೂ ಮಧುಮೇಹ ಪರೀಕ್ಷೆ ಸೇರಿದಂತೆ ವಿವಿಧ ಸೇವೆಗಳು ಉಚಿತವಾಗಿ ಲಭ್ಯವಿರುತ್ತವೆ ಎಂದು ತಿಳಿಸಲಾಗಿದೆ.

ಮೊದಲು ನೋಂದಾಯಿಸಿಕೊಳ್ಳುವ 25 ಬಿ.ಪಿ.ಎಲ್. ಕಾರ್ಡ್‌ದಾರರಿಗೆ ಉಚಿತ ಕನ್ನಡಕ ವಿತರಿಸಲಾಗುವುದು. ಕನ್ನಡಕ ಪಡೆಯಲು ತಪಾಸಣೆಗೆ ಆಗಮಿಸುವವರು ಮೂಲ ಬಿ.ಪಿ.ಎಲ್. ಪಡಿತರ ಚೀಟಿಯನ್ನು ಕಡ್ಡಾಯವಾಗಿ ತರಬೇಕು ಎಂದು ಸಂಘಟಕರು ತಿಳಿಸಿದ್ದಾರೆ.

ಹೆಚ್ಚಿನ ಮಾಹಿತಿಗಾಗಿ 8050282520 ಹಾಗೂ 7353584573 ಸಂಖ್ಯೆಯನ್ನು ಸಂಪರ್ಕಿಸಬಹುದಾಗಿದೆ.