ಮುಲ್ಕಿ : ಪಡುಪಣಂಬೂರು ಗ್ರಾಮ ಪಂಚಾಯತ್ ಮತ್ತು ಕರ್ನಾಟಕ ಕಟ್ಟಡ ಕಾರ್ಮಿಕರ ಕಲ್ಯಾಣ ಮಂಡಳಿ ಇವರ ಜಂಟಿ ಆಶ್ರಯದಲ್ಲಿ ನೋಂದಾಯಿತ ಕಟ್ಟಡ ಮತ್ತು ನಿರ್ಮಾಣ ಕಾರ್ಮಿಕರಿಗೆ ಹಾಗೂ ಅವಲಂಬಿತರಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ ದಿನಾಂಕ : 08-07-2024 ರಂದು ಗ್ರಾಮ ಪಂಚಾಯತ್ ಸಭಾಭವನದಲ್ಲಿ ನಡೆಯಿತು. ಕಾರ್ಯಕ್ರಮವನ್ನು ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ಕುಸುಮ ಚಂದ್ರಶೇಖರ್ ಇವರು ದೀಪ ಬೆಳಗಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ ಪಂಚಾಯತ್ ಸದಸ್ಯರಾದ ಶ್ರೀ ವಿನೋದ್ ಎಸ್ ಸಾಲ್ಯಾನ್, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಶ್ರೀ ಸುಧೀರ್, ಗ್ರಾಮ ಪಂಚಾಯತ್ ಮಟ್ಟದ ಸಂಜೀವಿನಿ ಒಕ್ಕೂಟದ ಅಧ್ಯಕ್ಷೆ ಶ್ರೀಮತಿ ಗೀತಾ, ಕರ್ನಾಟಕ ಕಟ್ಟಡ ಕಾರ್ಮಿಕರ ಕಲ್ಯಾಣ ಮಂಡಳಿಯ ಅಧಿಕಾರಿಗಳು, ಆದರ್ಶ್ ಆಸ್ಪತ್ರೆ ಉಡುಪಿ ಇದರ ವೈದ್ಯರು ಮತ್ತು ಸಿಬ್ಬಂದಿಗಳು ಉಪಸ್ಥಿತರಿದ್ದರು. ನೋಂದಾಯಿತ ಕಟ್ಟಡ ಕಾರ್ಮಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಶಿಬಿರದ ಸದುಪಯೋಗ ಪಡೆದುಕೊಂಡರು.
ಕಟ್ಟಡ ಮತ್ತು ನಿರ್ಮಾಣ ಕಾರ್ಮಿಕರಿಗೆ ಹಾಗೂ ಅವಲಂಬಿತರಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ
RELATED ARTICLES