Thursday, April 24, 2025
Homeಮಂಗಳೂರುಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಉಚಿತ ವಿದ್ಯಾರ್ಥಿನಿಲಯ

ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಉಚಿತ ವಿದ್ಯಾರ್ಥಿನಿಲಯ

ಆರ್ಥಿಕವಾಗಿ ಹಿಂದುಳಿದ ಗ್ರಾಮೀಣ ಪ್ರದೇಶದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಶಿಸ್ತುಬದ್ಧ ವಿದ್ಯಾಭ್ಯಾಸ ನೀಡುವ ಉದ್ದೇಶದಿಂದ ಮಂಗಳೂರು ರಾಮಕೃಷ್ಣ ಮಿಷನ್ ಬಾಲಕಾಶ್ರಮವು ಅರ್ಹ ವಿದ್ಯಾರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಆಶ್ರಮದ ಪವಿತ್ರವಾದ ವಾತಾವರಣದಲ್ಲಿ, ಆಶ್ರಮವಾಸಿಗಳಾದ ಸ್ವಾಮೀಜಿಯವರ ಮೇಲ್ವಿಚಾರಣೆಯಲ್ಲಿ ವಿದ್ಯಾರ್ಥಿಗಳಿಗೆ ಶಿಕ್ಷಣ ಮತ್ತು ಸರ್ವತೋಮುಖ ಬೆಳವಣಿಗೆಗೆ ಬೇಕಾದ ಜೀವನದ ಮೌಲ್ಯಗಳನ್ನು ತಿಳಿಸಿಕೊಡಲಾಗುತ್ತದೆ. ಶಿಕ್ಷಣ, ಊಟ, ವಸತಿಗಳನ್ನು ಉಚಿತವಾಗಿ ಒದಗಿಸಲಾಗುವುದು.
ಅರ್ಜಿ ಸಲ್ಲಿಸಬಯಸುವವರಿಗೆ ಸೂಚನೆಗಳು:
* 7ನೇ ತರಗತಿಯಲ್ಲಿ ಉತ್ತಮ ಶ್ರೇಣಿಯಲ್ಲಿ ಉತ್ತೀರ್ಣರಾದ,
ಗಂಡು ಮಕ್ಕಳು ಮಾತ್ರ ಅರ್ಜಿಯನ್ನು ಸಲ್ಲಿಸಬಹುದು.
* 8ನೇ ತರಗತಿಗೆ ಮಾತ್ರ ಪ್ರವೇಶ
* ಕಳೆದ 75 ವರ್ಷಗಳಿಂದ ನೂರಾರು ಅರ್ಹ ವಿದ್ಯಾರ್ಥಿಗಳು
ಬಾಲಕಾಶ್ರಮದಲ್ಲಿ ಸ್ವಾಮಿ ವಿವೇಕಾನಂದರ
ಧ್ಯೇಯೋದ್ದೇಶಗಳಿಗೆ ಪೂರಕವಾದ ವ್ಯಕ್ತಿತ್ವ ನಿರ್ಮಾಣಕಾರಿ
ಶಿಕ್ಷಣವನ್ನು ಪಡೆದುಕೊಂಡಿರುತ್ತಾರೆ. ಮೊದಲು ಬಂದವರಿಗೆ
ಆದ್ಯತೆಯನ್ನು ನೀಡಲಾಗುವುದು.
* ಭರಿಸಿದ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 25.04.2025
* ಅರ್ಜಿಯನ್ನು, ನಿಯಮಾವಳಿಯ ಪ್ರತಿಯನ್ನು ಪಡೆಯಲು ಹಾಗು ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ – ರಾಮಕೃಷ್ಣ ಮಿಷನ್ ಬಾಲಕಾಶ್ರಮ ಮಂಗಳಾದೇವಿ, ಮಂಗಳೂರು – 575 001

email rkmbalakashrama@gmail.com
ಪೋನ್: 0824-241 4216
ಕಛೇರಿ ಸಮಯ: ಬೆಳಿಗ್ಗೆ 8.00 ರಿಂದ ಮಧ್ಯಾಹ್ನ 12.00 ಮತ್ತು ಸಂಜೆ 4.00 ರಿಂದ 6.00 ಗಂಟೆಯವರೆಗೆ.

RELATED ARTICLES
- Advertisment -
Google search engine

Most Popular