Sunday, January 19, 2025
Homeಕಾಸರಗೋಡುಎಣ್ಮಕಜೆ ಗ್ರಾಮ ಪಂಚಾಯತ್‌ನಿಂದ ಎಸ್ಸಿ, ಎಸ್ಟಿ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್ ಟ್ಯಾಪ್ ವಿತರಣೆ

ಎಣ್ಮಕಜೆ ಗ್ರಾಮ ಪಂಚಾಯತ್‌ನಿಂದ ಎಸ್ಸಿ, ಎಸ್ಟಿ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್ ಟ್ಯಾಪ್ ವಿತರಣೆ

ಪೆರ್ಲ: ಎಣ್ಮಕಜೆ ಗ್ರಾಮ ಪಂಚಾಯತ್‌ನ 2024-25ನೇ ವಾರ್ಷಿಕ ಯೋಜನೆಯಂತೆ ಪರಿಶಿಷ್ಟ ಜಾತಿ, ವರ್ಗದ ವಿದ್ಯಾರ್ಥಿಗಳಿಗೆ ಕೊಡಮಾಡುವ ಉಚಿತ ಲ್ಯಾಪ್ ಟಾಪ್‌ನ್ನು ಪಂಚಾಯತ್‌ ಅಧ್ಯಕ್ಷ ಸೋಮಶೇಖರ್ ಜೆ.ಎಸ್. ವಿತರಿಸಿದ್ದಾರೆ.

ಈ ಸಂದರ್ಭದಲ್ಲಿ ಪಂಚಾಯತ್‌ ಅಭಿವೃದ್ಧಿ ಸ್ಥಾಯಿ ಸಮಿತಿ ಅಧ್ಯಕ್ಷ ಬಿ.ಎಸ್.ಗಾಂಭೀರ್, ಪಂ.ಸದಸ್ಯರಾದ ನರಸಿಂಹ ಪೂಜಾರಿ, ರಾಮಚಂದ್ರ, ಕುಸುಮಾವತಿ, ಶಶಿಧರ, ಉಷಾ ಕುಮಾರಿ, ಆಶಾಲತಾ, ಸಹಾಯಕ ಕಾರ್ಯದರ್ಶಿ ಗಿರೀಶ್ ಸಿ., ಪಂಚಾಯತ್‌ ಯೋಜನಾ ಸಮಿತಿ ಉಪಾಧ್ಯಕ್ಷೆ ಆಯಿಷಾ ಎ.ಎ. ಮೊದಲಾದವರು ಉಪಸ್ಥಿತರಿದ್ದರು.

RELATED ARTICLES
- Advertisment -
Google search engine

Most Popular