ಮೂಡುಬಿದಿರೆ: ಇಲ್ಲಿನ ಪ್ರಸಾದ್ ನೇತ್ರಾಲಯ ಸೂಪರ್ ಸ್ಪೆಷಾಲಿಟಿ ಕಣ್ಣಿನ ಆಸ್ಪತ್ರೆ ಕೇಂದ್ರದಲ್ಲಿ ‘ಲಾಸಿಕ್ ಲೇಸರ್ ಕಣ್ಣಿನ ಉಚಿತ ತಪಾಸಣಾ ಶಿಬಿರ’ವು ಎಪ್ರಿಲ್ 19, ಶನಿವಾರದಂದು ಬೆಳಿಗ್ಗೆ 9ರಿಂದ ಮಧ್ಯಾಹ್ನ 1ರ ವರೆಗೆ ನಡೆಯಲಿದೆ.
18 ವರ್ಷ ಪ್ರಾಯದಿಂದ ಸುಮಾರು 40 ವರ್ಷ ಪ್ರಾಯದವರೆಗಿನವರಿಗೆ ಮಾಡಬಹುದಾದ ಅತ್ಯಾಧುನಿಕ ಲೇಸರ್ ಚಿಕಿತ್ಸೆಯ ಮೂಲಕ ಕನ್ನಡಕ ಮತ್ತು ಕಾಂಟಾಕ್ಟ್ ಲೆನ್ಸ್ನಿಂದ ಮುಕ್ತಿ ಹೊಂದಬಹುದಲ್ಲದೇ ಈ ಚಿಕಿತ್ಸೆಯಿಂದ 5 ನಿಮಿಷಗಳಲ್ಲಿ ಪರಿಶುದ್ಧವಾದ ದೃಷ್ಟಿಯನ್ನು ಪಡೆಯಬಹುದು. ಚಿಕಿತ್ಸೆಯ ನಂತರ ಕೂಡಲೇ ರೋಗಿಯು ತನ್ನೆಲ್ಲಾ ದೈನಂದಿನ ಚಟುವಟಿಕೆಗಳನ್ನು ಮಾಡಬಹುದು. ಯಾವುದೇ ನೋವು ಈ ಚಿಕಿತ್ಸೆಯಿಂದ ಉಂಟಾಗುವುದಿಲ್ಲ.
ಶಿಬಿರದಲ್ಲಿ ದೃಷ್ಟಿ ಪರೀಕ್ಷೆ, ಕಣ್ಣಿನ ನರ ಪರೀಕ್ಷೆ, ಟೋಪೋಗ್ರಫಿ ಸ್ಕ್ಯಾನ್ (ಶಸ್ತ್ರ ಚಿಕಿತ್ಸೆಗೆ ಮೊದಲು ಮಾಡುವ ಪರೀಕ್ಷೆ) ಮೊದಲಾದುವುಗಳನ್ನು ಉಚಿತವಾಗಿ ಮಾಡಲಾಗುವುದು. ಚಿಕಿತ್ಸೆಗೆ ಅರ್ಹವಾದ ರೋಗಿಗಳಿಗೆ ಲಾಸಿಕ್ ಲೇಸರ್ ಚಿಕಿತ್ಸೆಯನ್ನು 50% ರಿಯಾಯಿತಿ ದರದಲ್ಲಿ ನಡೆಸಲಾಗುವುದು. ಹೆಚ್ಚಿನ ವಿವರಗಳಿಗೆ 8792791085 ಈ ನಂಬರನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಏ 19 ರಂದು ಪ್ರಸಾದ್ ನೇತ್ರಾಲಯದಲ್ಲಿ ಲಾಸಿಕ್ ಲೇಸರ್ ಕಣ್ಣಿನ ಉಚಿತ ತಪಾಸಣಿ ಮತ್ತು ಶಸ್ತ್ರ ಚಿಕಿತ್ಸೆ
RELATED ARTICLES