ಶಕ್ತಿ’ ಯೋಜನೆ ಫಲಾನುಭವಿಗಳಿಗೆ ಉಚಿತ ಸ್ಮಾರ್ಟ್ ಕಾರ್ಡ್ ವಿತರಣೆ

0
9

ಬೆಂಗಳೂರು: ಶಕ್ತಿ ಯೋಜನೆ ಫಲಾನುಭವಿಗಳಿಗೆ ಸ್ಮಾರ್ಟ್ ಕಾರ್ಡ್ ನೀಡುವ ಕುರಿತು ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ.

ಮಕ್ಕಳನ್ನು ಹೊರತುಪಡಿಸಿ ಉಳಿದ ಎಲ್ಲಾ ಫಲಾನುಭವಿಗಳ ಸ್ಮಾರ್ಟ್ ಕಾರ್ಡ್ ವಿತರಿಸಲಾಗುವುದು.

ನಾಲ್ಕು ಸಾರಿಗೆ ನಿಗಮಗಳ ಜೊತೆಗೆ ಮೆಟ್ರೋದಲ್ಲಿಯೂ ಬಳಕೆಯಾಗುವಂತೆ ಸ್ಮಾರ್ಟ್ ಕಾರ್ಡ್ ನೀಡಬೇಕೆ ಎನ್ನುವ ಬಗ್ಗೆ ಚರ್ಚಿಸಲಾಗುತ್ತಿದೆ. ಶೀಘ್ರದಲ್ಲಿ ಟೆಂಡರ್ ಪ್ರಕ್ರಿಯೆಗೆ ಚಾಲನೆ ನೀಡಲಾಗುವುದು. ಮೂರು ಕೋಟಿ ಮಂದಿಗೆ ಸ್ಮಾರ್ಟ್ ಕಾರ್ಡ್ ವಿತರಿಸಲು ಚಿಂತನೆ ನಡೆಸಲಾಗಿದೆ ಎಂದು ಹೇಳಿದ್ದಾರೆ.

ನಮ್ಮ ರಸ್ತೆ ನಮ್ಮ ಸುರಕ್ಷತೆ ಧ್ಯೇಯದ ಆಡಿ ರಸ್ತೆ ಅಪಘಾತಗಳ ಕುರಿತಂತೆ ಜನರಲ್ಲಿ ಜಾಗೃತಿ ಮೂಡಿಸಲು ಮಾರ್ಚ್ 7ರಂದು ನಗರದಲ್ಲಿ 5ಕೆ ಸೇಫ್ ಎ ಥಾನ್ ಆಯೋಜಿಸಲಾಗುತ್ತಿದೆ. ಆಸಕ್ತರು ವಾಕಿಂಗ್, ಸೈಕ್ಲಿಂಗ್, ಓಟದ ಮೂಲಕ ಅಭಿಯಾನದಲ್ಲಿ ಪಾಲ್ಗೊಳ್ಳಬಹುದಾಗಿದೆ. www.saferoadsKarnataka.com ನಲ್ಲಿ ಉಚಿತ ನೋಂದಣಿ ಮಾಡಿಕೊಳ್ಳಬಹುದಾಗಿದೆ ಎಂದು ಹೇಳಿದ್ದಾರೆ.

LEAVE A REPLY

Please enter your comment!
Please enter your name here