ಪಣಂಬೂರು : ಪ್ರಧಾನ ಮಂತ್ರಿ ಕೌಶಲ್ಯಾಭಿವೃದ್ಧಿ ಯೋಜನೆಯಡಿ ಪಣಂಬೂರಿನ Skill Development Centre, Centre of Excellence in Maritime & Ship Building (CEMS) ವತಿಯಿಂದ ಉಚಿತ ಕೌಶಲ್ಯಾಭಿವೃದ್ಧಿ ತರಬೇತಿ ಕಾರ್ಯಕ್ರಮ ಆಯೋಜಿಸಲಾಗಿದೆ.
ಪದವಿ ಹಾಗೂ ಎಸ್‌ಎಸ್‌ಎಲ್‌ಸಿ ಉತ್ತೀರ್ಣರಾದ ಅಭ್ಯರ್ಥಿಗಳಿಗೆ ವಿವಿಧ ಕೌಶಲ್ಯ ತರಬೇತಿಗಳನ್ನು ನೀಡಲಾಗುತ್ತಿದ್ದು, ಆಸಕ್ತರು ಇದರ ಸದುಪಯೋಗ ಪಡೆದುಕೊಳ್ಳುವಂತೆ ಕೇಂದ್ರದ ವತಿಯಿಂದ ತಿಳಿಸಲಾಗಿದೆ.
ಈ ಕೌಶಲ್ಯ ತರಬೇತಿ ಕಾರ್ಯಕ್ರಮದ ಕುರಿತು ಸೆಪ್ಟೆಂಬರ್ 30, 2026ರಂದು ಮಾಹಿತಿ ಹಾಗೂ ಮಾರ್ಗದರ್ಶನ ನೀಡಲಾಗುವುದು. ಕಾರ್ಯಕ್ರಮದಲ್ಲಿ ಸೆಂಟರ್ ಮ್ಯಾನೇಜರ್, ನವ ಮಂಗಳೂರು ಬಂದರು ಪ್ರಾಧಿಕಾರದ ನಿವೃತ್ತ ಟ್ರಸ್ಟಿ ಭರತ್ ಕುಮಾರ್ ಸೇರಿದಂತೆ ವಿವಿಧ ಗಣ್ಯರು ಉಪಸ್ಥಿತರಿದ್ದು, ತರಬೇತಿಯ ಮಹತ್ವ ಹಾಗೂ ಉದ್ಯೋಗಾವಕಾಶಗಳ ಕುರಿತು ಮಾಹಿತಿ ನೀಡಲಿದ್ದಾರೆ.
ಹೆಚ್ಚಿನ ಮಾಹಿತಿಗಾಗಿ: ಭರತ್ ಕುಮಾರ್ – 9902170560
Skill Development Centre, CEMS, NMPA Colony, ಪಣಂಬೂರು – 575010.
