ದಾವಣಗೆರೆ: ಮೈಸೂರಿನ ಹೊಟಗಳ್ಳಿ ಸರ್ಕಾರಿ ಪ್ರೌಢಶಾಲೆ ಮತ್ತು ದಾವಣಗೆರೆಯ ಕಲಾಕುಂಚ ಸಾಂಸ್ಕೃತಿಕ ಸಂಸ್ಥೆ ಸಂಯುಕ್ತಾಶ್ರಯದಲ್ಲಿ ಜನವರಿ 23 ರಂದು ಗುರುವಾರ ಬೆಳಿಗ್ಗೆ 10-30 ಗಂಟೆಗೆ ಮೈಸೂರು ಜಿಲ್ಲೆಯ ಹೊಟಗಳ್ಳಿ ಸರ್ಕಾರಿ ಪ್ರೌಢಶಾಲೆಯ ಶಾರದಾ ಸಭಾಂಗಣದಲ್ಲಿ 2024-25ನೇ ಸಾಲಿನ ಎಸ್.ಎಸ್.ಎಲ್.ಸಿ. ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಪರೀಕ್ಷಾ ಪೂರ್ವ ಸಿದ್ಧತಾ ಉಚಿತ ಕಾರ್ಯಾಗಾರ ಹಮ್ಮಿಕೊಳ್ಳಲಾಗಿದೆ ಎಂದು ಸಂಸ್ಥೆಯ ಅಧ್ಯಕ್ಷರಾದ ಕೆ.ಹೆಚ್.ಮಂಜುನಾಥ್ ತಿಳಿಸಿದ್ದಾರೆ.
ಸಮಾರಂಭದ ಉದ್ಘಾಟನೆಯನ್ನು ಮೈಸೂರಿನ ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಪ್ರಕಾಶ್ ನೆರವೇರಿಸಲಿದ್ದಾರೆ. ಅಧ್ಯಕ್ಷತೆಯನ್ನು ಜಿಲ್ಲಾ ಪಂಚಾಯಿತಿಯ ಶಾಲಾ ಶಿಕ್ಷಣ ಇಲಾಖೆಯ ಸರ್ಕಾರಿ ಪ್ರೌಢಶಾಲೆಯ ಮುಖ್ಯೋಪಾಧ್ಯಾಯನಿ ಶ್ರೀಮತಿ ಸಂಗೀತಾ ಪಿ.ನಾಡಿಗ್ ವಹಿಸಿಕೊಳ್ಳಲಿದ್ದಾರೆ. ಮುಖ್ಯ ಅತಿಥಿಗಳಾಗಿ ಮೈಸೂರು ಜಿಲ್ಲೆಯ ಕರ್ನಾಟಕ ಸುಗಮ ಸಂಗೀತ ಪರಿಷತ್ತಿನ ಜಿಲ್ಲಾಧ್ಯಕ್ಷರಾದ ನಾಗರಾಜ್ ವಿ.ಬೈರಿ ಆಗಮಿಸಲಿದ್ದಾರೆ. ಕಲಾಕುಂಚದ ಪ್ರಧಾನ ಕಾರ್ಯದರ್ಶಿ ಕೆ.ಸಿ.ಉಮೇಶ್, ಸಮಿತಿ ಸದಸ್ಯರಾದ ಶ್ರೀಮತಿ ಶಿಲ್ಪಾ ಉಮೇಶ್ ವೇದಿಕೆಯಲ್ಲಿ ಉಪಸ್ಥಿತರಿರುತ್ತಾರೆ.
ಶೈಕ್ಷಣಿಕ ಕಾಳಜಿಯ ಈ ಕಾರ್ಯಕ್ರಮಕ್ಕೆ ಎಸ್.ಎಸ್.ಎಲ್.ಸಿ. ವಿದ್ಯಾರ್ಥಿಗಳು, ಪೋಷಕರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಈ ಸಮಾರಂಭ ಯಶಸ್ವಿಗೊಳಿಸಬೇಕಾಗಿ ಕಲಾಕುಂಚ ಕಚೇರಿ ಕಾರ್ಯದರ್ಶಿ ಎಂ.ಎಸ್.ಪ್ರಸಾದ್ ವಿನಂತಿಸಿದ್ದಾರೆ.