Thursday, May 1, 2025
Homeದಾವಣಗೆರೆಜುಲೈ 25 ರಂದು ಯಕ್ಷರಂಗದಿಂದ ಉಚಿತ ಯಕ್ಷಗಾನ ಪ್ರದರ್ಶನ

ಜುಲೈ 25 ರಂದು ಯಕ್ಷರಂಗದಿಂದ ಉಚಿತ ಯಕ್ಷಗಾನ ಪ್ರದರ್ಶನ

ದಾವಣಗೆರೆಯ ಕಲಾಕುಂಚ ಸಾಂಸ್ಕೃತಿಕ ಸಂಸ್ಥೆಯ ಅಂಗ ಸಂಸ್ಥೆ ಯಕ್ಷರಂಗ ಯಕ್ಷಗಾನ ಸಂಸ್ಥೆ, ಕರಾವಳಿ ಮಿತ್ರ ಮಂಡಳಿ ಮತ್ತು ದೃಶ್ಯ ಕಲಾ ಮಹಾವಿದ್ಯಾಲಯದ ಸಂಯುಕ್ತಾಶ್ರಯದಲ್ಲಿ ಜುಲೈ 25 2024 ಗುರುವಾರ ಸಂಜೆ 6:30ಕ್ಕೆ ನಗರದ ವಿದ್ಯಾನಗರ ರಸ್ತೆಯ ದೃಶ್ಯ ಕಲಾ ಮಹಾವಿದ್ಯಾಲಯದ ಆವರಣದ ಒಳಾಂಗಣದಲ್ಲಿ ಉಡುಪಿ ಜಿಲ್ಲೆಯ ಹಾಲಾಡಿಯ ಶ್ರೀ ಮಹಾಗಣಪತಿ ಪ್ರವಾಸಿ ಯಕ್ಷಗಾನ ಮಂಡಳಿಯ ವೃತ್ತಿನಿರತ ಪ್ರಸಿದ್ಧ ಯಕ್ಷಗಾನ ಕಲಾವಿದರಿಂದ ಕೀರ್ತಿಶೇಷ ಹಲಸನಹಳ್ಳಿ ನರಸಿಂಹಶಾಸ್ತ್ರಿ ವಿರಚಿತ “ಚಂದ್ರಹಾಸ ಚರಿತ್ರೆ” ಪೌರಾಣಿಕೆ ಕಥಾನಕದ ಯಕ್ಷಗಾನ ಉಚಿತ ಪ್ರದರ್ಶನ ಹಮ್ಮಿಕೊಳ್ಳಲಾಗಿದೆ ಎಂದು ಯಕ್ಷರಂಗ ಸಂಸ್ಥೆಗಳ ಸಂಸ್ಥಾಪಕರಾದ ಸಾಲಿಗ್ರಾಮ ಗಣೇಶ್ ಶೆಣೈಯವರು ತಿಳಿಸಿದ್ದಾರೆ.

ಕರ್ನಾಟಕ ಕರಾವಳಿ ಜಿಲ್ಲೆಗಳ ವಿಶ್ವವಿಖ್ಯಾತ, ಐತಿಹಾಸಿಕ ಪರಂಪರೆಯ ಅಪ್ಪಟ ಜನಪದ ಕಲೆಯಾದ ಯಕ್ಷಗಾನವನ್ನು ವಾಣಿಜ್ಯ ನಗರಿ ದಾವಣಗೆರೆಯಲ್ಲಿ ವೈಭವೀಕರಿಸುವ ಸದುದ್ದೇಶದಿಂದ ಹಮ್ಮಿಕೊಳ್ಳಲಾದ ಈ ವೈಶಿಷ್ಟ ಪೂರ್ಣ ಯಕ್ಷಗಾನ ಪ್ರದರ್ಶನಕ್ಕೆ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಯಶಸ್ವಿಗೊಳಿಸಬೇಕಾಗಿ ಯಕ್ಷರಂಗದ ಅಧ್ಯಕ್ಷರಾದ ಮಲ್ಯಾಡಿ ಪ್ರಭಾಕರ ಶೆಟ್ಟಿ ವಿನಂತಿಸಿದ್ದಾರೆ.

RELATED ARTICLES
- Advertisment -
Google search engine

Most Popular