ದಾವಣಗೆರೆಯ ಕಲಾಕುಂಚ ಸಾಂಸ್ಕೃತಿಕ ಸಂಸ್ಥೆಯ ಅಂಗ ಸಂಸ್ಥೆ ಯಕ್ಷರಂಗ-ಯಕ್ಷಗಾನ ಸಂಸ್ಥೆಯ ಆಶ್ರಯದಲ್ಲಿ ಪ್ರತೀ ಭಾನುವಾರ ಬೆಳಿಗ್ಗೆ 7-30 ರಿಂದ 9 ಗಂಟೆಯವರೆಗೆ ನಗರದ ಕಸ್ತೂರ್ಬಾ ಬಡಾವಣೆಯ ಕುವೆಂಪು ರಸ್ತೆಯಲ್ಲಿರುವ ಕಲಾಕುಂಚ ಕಛೇರಿ ಸಭಾಂಗಣದಲ್ಲಿ ಮಕ್ಕಳಿಗೆ, ಮಹಿಳೆಯರಿಗೆ, ಪುರುಷರಿಗೆ ಉಚಿತವಾಗಿ ಯಕ್ಷಗಾನ ತರಬೇತಿ ನೀಡಲಾಗುವುದು ಎಂದು ಯಕ್ಷರಂಗದ ಅಧ್ಯಕ್ಷರಾದ ಮಲ್ಯಾಡಿ ಪ್ರಭಾಕರ ಶೆಟ್ಟಿ ತಿಳಿಸಿದ್ದಾರೆ.
ಯಕ್ಷಗಾನ ಕಲಾವಿದರಾದ ಹಟ್ಟಿಯಂಗಡಿ ಆನಂದಶೆಟ್ಟಿ, ಪ್ರದೀಪ್ ಕಾರಂತ್ ತರಬೇತಿ ನೀಡಲಿದ್ದು, ಯಕ್ಷಗಾನದ ಆಸಕ್ತರು ಈ ಕೆಳಗಿನ ಸನೀಹವಾಣಿಗಳಿಗೆ ಸಂಪರ್ಕಿಸಬಹುದು ಎಂದು ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಬೇಳೂರು ಸಂತೋಷ್‌ಕುಮಾರ ಶೆಟ್ಟಿ ಪ್ರಕಟಿಸಿದ್ದಾರೆ. ಕರ್ನಾಟಕ ಕರಾವಳಿ ಜಿಲ್ಲೆಗಳ ವಿಶ್ವವಿಖ್ಯಾತ ಅಪ್ಪಟ ಕನ್ನಡದ ಆರಾಧನಾ ಕಲೆಗೆ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಈ ಮುಕ್ತವಾದ ಸದಾವಕಾಶಗಳನ್ನು ಸದ್ಭಳಕೆ ಮಾಡಿಕೊಳ್ಳಬೇಕಾಗಿ ಸಂಸ್ಥೆಯ ಸಂಸ್ಥಾಪಕರಾದ ಸಾಲಿಗ್ರಾಮ ಗಣೇಶ್ ಶೆಣೈ ವಿನಂತಿಸಿದ್ದಾರೆ. ಸಂಪರ್ಕಿಸುವ ಸನೀಹವಾಣಿಗಳು 9901770315, 9481181446
