ದಾವಣಗೆರೆಯ ಕಲಾಕುಂಚ ಸಾಂಸ್ಕೃತಿಕ ಸಂಸ್ಥೆಯ ಸಿದ್ದವೀರಪ್ಪ ಬಡಾವಣೆಯ ಶಾಖೆಯ ಆಶ್ರಯದಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ ಪ್ರಯುಕ್ತ ಜೂನ್ 10 ರಂದು ದಾವಣಗೆರೆ ಸಿದ್ದವೀರಪ್ಪ ಬಡಾವಣೆಯ ಶ್ರೀ ಯಗಟಿ ಮಲ್ಲಿಕಾರ್ಜುನ ನಿಲಯದ ಸಭಾಂಗಣದಲ್ಲಿ ಪ್ರತಿದಿನ ಸಂಜೆ 5 ಗಂಟೆಗೆ ಉಚಿತ ಯೋಗ ಶಿಬಿರ ಉದ್ಘಾಟನೆಯಾಗಲಿದೆ ಎಂದು ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಶ್ರೀಮತಿ ಸುಮಾ ಏಕಾಂತಪ್ಪ ತಿಳಿಸಿದ್ದಾರೆ.
ದಾವಣಗೆರೆಯ ಆದರ್ಶ ಯೋಗ ಪ್ರತಿಷ್ಠಾನದ ಸಂಸ್ಥಾಪಕರು ಹಿರಿಯ ಯೋಗ ತಜ್ಞರಾದ ಡಾ. ರಾಘವೇಂದ್ರ ಗುರೂಜಿಯವರು ಉದ್ಘಾಟಿಸಲಿದ್ದಾರೆ. ಅಧ್ಯಕ್ಷತೆಯನ್ನು ಸಂಸ್ಥೆಯ ಸಂಸ್ಥಾಪಕರಾದ ಸಾಲಿಗ್ರಾಮ ಗಣೇಶ್‌ಶೆಣೈ ವಹಿಸಿಕೊಳ್ಳಲಿದ್ದಾರೆ. ಮುಖ್ಯ ಅತಿಥಿಗಳಾಗಿ ಭರತಾಂಜಲಿ ನೃತ್ಯ ಕಲಾ ಅಕಾಡೆಮಿಯ ಸಂಸ್ಥಾಪಕರಾದ ಡಾ|| ಮಂಗಳಾ ಶೇಖರ್ ಆಗಮಿಸಲಿದ್ದಾರೆ. ಯೋಗ ಪಟು ಶಿಕ್ಷಕಿಯರಾದ ಲೀಲಾ ಸುಭಾಷ್, ಸಂಧ್ಯಾ ಶ್ರೀನಿವಾಸ, ಗೌರವ ಉಪಸ್ಥಿತರಿರುತ್ತಾರೆ. ಯೋಗಾಸಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಈ ಉಚಿತ ಯೋಗ ಶಿಬಿರ ಯಶಸ್ವಿಗೊಳಿಸಬೇಕಾಗಿ ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಕೆ.ಸಿ.ಉಮೇಶ್ ವಿನಂತಿಸಿದ್ದಾರೆ.
ಜೂ. 10 ರಂದು ಕಲಾಕುಂಚದಿಂದ ಉಚಿತ ಯೋಗ ಶಿಬಿರ ಉದ್ಘಾಟನೆ
RELATED ARTICLES