ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಪೆರ್ಲ ಬೈಪಾಡಿಯಲ್ಲಿ 78ನೇ ಸ್ವಾತಂತ್ರ್ಯೋತ್ಸವವನ್ನು ವಿಜೃಂಭಣೆಯಿಂದ ಆಚರಿಸಲಾಯಿತು. ಎಸ್‌ಡಿ ಎಂಸಿ ಅಧ್ಯಕ್ಷರಾದ ದಾಮೋದರ ದ್ವಜಾರೋಹಣ ನೆರವೇರಿಸಿದರು. ತದನಂತರ ದೇಶಭಕ್ತಿಯನ್ನು ಬಿಂಬಿಸುವ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಿತು. ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯಿತಿ ಸದಸ್ಯೆ ಅನಿತಾ ಕೆ, ಎಸ್ ಡಿ ಎಂ ಸಿ ಸದಸ್ಯರು, ಪೋಷಕರು,ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು.
ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಪೆರ್ಲ ಬೈಪಾಡಿಯಲ್ಲಿ ಸ್ವಾತಂತ್ರೋತ್ಸವ
RELATED ARTICLES