ಆಗಸ್ಟ್ 2ರಂದು ತುಳುನಾಡ ರಕ್ಷಣಾ ವೇದಿಕೆ ಬೈರಂಪಳ್ಳಿ ಘಟಕದ ಕಾರ್ಯಕರ್ತರ ಸ್ನೇಹ ಸಮ್ಮಿಲನ ಹಾಗೂ ಕಾರ್ಯಕರ್ತರ ಸೇರ್ಪಡೆ ಕಾರ್ಯಕ್ರಮ

0
15

ಬೈರಂಪಳ್ಳಿ : ತುಳುನಾಡಿನ ಭಾಷೆ, ಸಂಸ್ಕೃತಿ, ಸಂಪ್ರದಾಯ, ಆಚರಣೆ ಮತ್ತು ಪರಂಪರೆಯನ್ನು ಉಳಿಸಿ ಬೆಳೆಸುವ ಉದ್ದೇಶದಿಂದ ಕಾರ್ಯನಿರ್ವಹಿಸುತ್ತಿರುವ ತುಳುನಾಡ ರಕ್ಷಣಾ ವೇದಿಕೆ ಬೈರಂಪಳ್ಳಿ ಘಟಕದ ವತಿಯಿಂದ ಆಗಸ್ಟ್ 2ರಂದು ಸಾಂತ್ಯರ್ ಅಂಬೇಡ್ಕರ್ ಸಭಾಭವನದಲ್ಲಿ (ಭಾನುವಾರ) ಕಾರ್ಯಕರ್ತರ ಸ್ನೇಹ ಸಮ್ಮಿಲನ ಹಾಗೂ ನೂತನ ಕಾರ್ಯಕರ್ತರ ಸೇರ್ಪಡೆ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.

ಸಭೆಯಲ್ಲಿ ಸ್ಥಾಪಕ ಅದ್ಯಕ್ಷ ಯೋಗಿಶ್ ಶೆಟ್ಟಿ ಜಪ್ಪು , ಜಿಲ್ಲಾದ್ಯಕ್ಷರಾದ ಫ್ಯ್ರಾಂಕಿ ಡಿಸೋಜ ಕೊಳಲಗಿರಿ ಮತ್ತಿತ್ತರ ಮುಖಂಡರು ಉಪಸ್ಥಿತರಿರುವರು.

ಈ ಕಾರ್ಯಕ್ರಮದಲ್ಲಿ ಸಂಘಟನೆಯ ವಿವಿಧ ಹಂತದ ಪದಾಧಿಕಾರಿಗಳು, ಮುಖಂಡರು, ಕಾರ್ಯಕರ್ತರು ಹಾಗೂ ತುಳುನಾಡಿನ ಬಗ್ಗೆ ಅಭಿಮಾನ ಹೊಂದಿರುವ ಗಣ್ಯರು ಭಾಗವಹಿಸಲಿದ್ದು, ಸಂಘಟನೆಯ ಕಳೆದ ಒಂದು ವರ್ಷದ ಚಟುವಟಿಕೆಗಳ ಅವಲೋಕನ, ಮುಂದಿನ ದಿನಗಳಲ್ಲಿ ಕೈಗೊಳ್ಳಬೇಕಾದ ಜನಪರ ಹಾಗೂ ಸಾಮಾಜಿಕ ಕಾರ್ಯಕ್ರಮಗಳ ಕುರಿತು ಸಮಗ್ರ ಚರ್ಚೆ ನಡೆಯಲಿದೆ.

ಇದರೊಂದಿಗೆ ತುಳುನಾಡಿನ ಭಾಷೆ, ಸಂಸ್ಕೃತಿ, ಪರಂಪರೆ ಮತ್ತು ಜನಪರ ಹಕ್ಕುಗಳ ರಕ್ಷಣೆಗೆ ಆಸಕ್ತಿ ಹೊಂದಿರುವ ಯುವಕ-ಯುವತಿಯರನ್ನು ತುಳುನಾಡ ರಕ್ಷಣಾ ವೇದಿಕೆಗೆ ಅಧಿಕೃತವಾಗಿ ಸೇರ್ಪಡೆಗೊಳಿಸುವ ಕಾರ್ಯಕ್ರಮವೂ ನಡೆಯಲಿದೆ. ಸಮಾಜ ಸೇವೆ, ಪರಿಸರ ಸಂರಕ್ಷಣೆ, ಜನಜಾಗೃತಿ, ಸಾಮಾಜಿಕ ನ್ಯಾಯ ಹಾಗೂ ತುಳುನಾಡಿನ ಸಾಂಸ್ಕೃತಿಕ ಮೌಲ್ಯಗಳ ಉಳಿವಿಗಾಗಿ ಯುವಜನತೆ ಹೆಚ್ಚಿನ ಸಂಖ್ಯೆಯಲ್ಲಿ ಸಂಘಟನೆಗೆ ಸೇರ್ಪಡೆಗೊಂಡು ಸಂಘಟನೆಯನ್ನು ಮತ್ತಷ್ಟು ಬಲಿಷ್ಠಗೊಳಿಸಬೇಕೆಂದು ಸಂಘಟನೆಯ ಮುಖಂಡರು ಮನವಿ ಮಾಡಿದ್ದಾರೆ.

ತುಳುನಾಡಿನ ಭಾಷೆ ಮತ್ತು ಸಂಸ್ಕೃತಿಯ ಉಳಿವಿಗೆ ಯುವ ಸಮುದಾಯದ ಪಾತ್ರ ಅತ್ಯಂತ ಮಹತ್ವದ್ದಾಗಿದ್ದು, ಪ್ರತಿಯೊಬ್ಬ ತುಳುನಾಡಿನ ಅಭಿಮಾನಿಯೂ ಈ ಕಾರ್ಯಕ್ರಮದಲ್ಲಿ ಭಾಗವಹಿಸಿ ಸಂಘಟನೆಯೊಂದಿಗೆ ಕೈಜೋಡಿಸಬೇಕು ಎಂದು ಕೋರಲಾಗಿದೆ.

ಆದ್ದರಿಂದ ತುಳುನಾಡಿನ ಭಾಷೆ, ಸಂಸ್ಕೃತಿ, ಆಚರಣೆ, ವಿಚಾರಧಾರೆ ಹಾಗೂ ಪರಂಪರೆಯ ಬಗ್ಗೆ ಕಾಳಜಿ ಹೊಂದಿರುವ ಯುವಕರು, ಯುವತಿಯರು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸುವಂತೆ ತುಳುನಾಡ ರಕ್ಷಣಾ ವೇದಿಕೆ ಬೈರಂಪಳ್ಳಿ ಘಟಕದ ವತಿಯಿಂದ ವಿನಂತಿಸಲಾಗಿದೆ.