ಮಂಗಳೂರಿನ ಸಂತ ಆಗ್ನೆಸ್ ಸಮೂಹ ವಿದ್ಯಾಸಂಸ್ಥೆಗಳಿಂದ – ಸುವರ್ಣ ಕರ್ನಾಟಕ ರಾಜ್ಯೋತ್ಸವದ ಅಂಗವಾಗಿ ನಡೆದ ಕಾರ್ಯಕ್ರಮ ನಡೆಯಿತು.
ದಿನಾಂಕ 01-11-2024ರಂದು ಮಂಗಳೂರಿನ ಸಂತ ಆಗ್ನೇಸ್ ಸಮೂಹ ವಿದ್ಯಾಸಂಸ್ಥೆಯ ಶಿಕ್ಷಕ-ಶಿಕ್ಷಕೇತರ ಸಿಬ್ಬಂದಿಗಳು ಮತ್ತು ವಿದ್ಯಾರ್ಥಿಗಳು, ವಿದ್ಯಾರ್ಥಿನಿಯರುಗಳ ಕೂಡುವಿಕೆಯೊಂದಿಗೆ ಕಾರ್ಯಕ್ರಮ ನಡೆಯಿತು.
ಮೊದಲಿಗೆ ಸ್ವಾಗತ, ಧ್ವಜಾರೋಹಣ, ನಾಡಗೀತೆಯ ಪ್ರಾರ್ಥನೆ ಯೊಂದಿಗೆ ಪ್ರಾರಂಭವಾದ ಕಾರ್ಯಕ್ರಮದಲ್ಲಿ,ಉದಯವಾಗಲಿ ನಮ್ಮ ಚೆಲುವ ಕನ್ನಡ ನಾಡು, ಬಾರಿಸು ಕನ್ನಡ ಡಿಂಡಿಮವ, ಹಚ್ಚೇವು ಕನ್ನಡದ ದೀಪ, ವಿಶ್ವ ವಿನೂತನ ವಿದ್ಯಾಚೇತನ ಮತ್ತು ಹುಟ್ಟಿದರೆ ಕನ್ನಡ ನಾಡಲಿ ಹುಟ್ಟಬೇಕು …ಮುಂತಾದ ಹಾಡುಗಳನ್ನು ವಿದ್ಯಾರ್ಥಿಗಳು ಹಾಡಿದರು. ಈ ಸಂದರ್ಭದಲ್ಲಿ ಸೇರಿದ್ದ ಸರ್ವರ ಸಮ್ಮುಖದಲ್ಲಿ ಕನ್ನಡ ಭಾಷೆಯನ್ನು ಉಳಿಸುವ,ಬೆಳೆಸುವ ಮತ್ತು ಪಸರಿಸುವ ಸಂಕಲ್ಪವನ್ನು ಮಾಡಲಾಯಿತು. ಪ್ರೌಢಶಾಲಾ ಮುಖ್ಯೋಪಾಧ್ಯಾಯಿನಿ ಸಿಸ್ಟರ್ ಎಂ ಗ್ಲೋರಿಯಾ ಎ ಸಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಕನ್ನಡದ ಮಹತ್ವವನ್ನು ವಿವರಿಸಿದರು.
ಕಾರ್ಯಕ್ರಮದಲ್ಲಿ ಸಂತ ಆಗ್ನೆಸ್ ಪದವಿ ಕಾಲೇಜಿನ ಪ್ರಾಂಶುಪಾಲರಾದ ಡಾ. ಸಿಸ್ಟರ್ ವೆನಿಸ್ಸಾ ಎ ಸಿ, ಪದವಿಪೂರ್ವ ಪ್ರಾಂಶುಪಾಲರಾದ ಸಿಸ್ಟರ್ ನೊರೀನ್, ಮಾಧ್ಯಮಿಕ ಶಾಲಾ ಮುಖ್ಯೋಪಾಧ್ಯಾಯಿನಿ ಸಿಸ್ಟರ್ ಜೋತ್ನ್ಸಾ, ವಿವಿಧ ವಿಭಾಗದ ಡೀನ್ ಗಳು, ಪ್ರಾಧ್ಯಾಪಕರು, ಶಿಕ್ಷಕರು, ಶಿಕ್ಷಕೇತರರು ಮತ್ತು ಸ್ನಾತಕೋತ್ತರಪದವಿ, ಪದವಿ, ಪದವಿಪೂರ್ವ, ಪ್ರೌಢಶಾಲಾ ತರಗತಿಗಳ ವಿದ್ಯಾರ್ಥಿ ವಿದ್ಯಾರ್ಥಿನಿಯರು ಪಾಲ್ಗೊಂಡರು.
ವಿದ್ಯಾರ್ಥಿನಿ ಅನೂಷಾ ಕಾರ್ಯಕ್ರಮ ನಿರೂಪಿಸಿದರು. ಸಿಸ್ಟರ್ ಎಂ. ಗ್ಲೋರಿಯಾ ಕಾರ್ಯಕ್ರಮವನ್ನು ಸಂಯೋಜಿಸಿದರು.
ಮಂಗಳೂರಿನ ಸಂತ ಆಗ್ನೆಸ್ ಸಮೂಹ ವಿದ್ಯಾಸಂಸ್ಥೆಗಳಿಂದ – ಸುವರ್ಣ ಕರ್ನಾಟಕ ರಾಜ್ಯೋತ್ಸವ
RELATED ARTICLES