ಎಸ್ಐ ಕಿಶೋರ್ ಜನ್ಮದಿನದ ಪ್ರಯುಕ್ತ ಆಸ್ಪತ್ರೆ ರೋಗಿಗಳಿಗೆ ಹಣ್ಣುಹಂಪಲು ವಿತರಣೆ

0
5

ಬೆಳ್ತಂಗಡಿ : ದಕ್ಷಿಣ ಕನ್ನಡ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ “ರಾಜಕೇಸರಿ ಸೇವಾ ಟ್ರಸ್ಟ್ (ರಿ.) ಕರ್ನಾಟಕ ಸಂಸ್ಥೆಯ ವತಿಯಿಂದ ಧರ್ಮಸ್ಥಳ ಪೊಲೀಸ್ ಠಾಣಾ ಎಸ್ಐ ಕಿಶೋರ್ ಅವರ ಹುಟ್ಟುಹಬ್ಬದ ಪ್ರಯುಕ್ತ ಬೆಳ್ತಂಗಡಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಹಣ್ಣು ಹಂಪಲು ವಿತರಣೆ

ಬೆಳ್ತಂಗಡಿ : ದಕ್ಷಿಣ ಕನ್ನಡ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ “ರಾಜಕೇಸರಿ ಸೇವಾ ಟ್ರಸ್ಟ್ (ರಿ.) ಕರ್ನಾಟಕ ಸಂಸ್ಥೆಯ ವತಿಯಿಂದ ಬೆಳ್ತಂಗಡಿ ಟ್ರಾಫಿಕ್ ಠಾಣೆ ಉಪ ನಿರೀಕ್ಷಕರು ಹಾಗೂ ಧರ್ಮಸ್ಥಳ ಪೊಲೀಸ್ ಠಾಣಾ ಎಸ್ಐ ಕಿಶೋರ್ ಅವರ ಹುಟ್ಟುಹಬ್ಬದ ಪ್ರಯುಕ್ತ ಬೆಳ್ತಂಗಡಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಒಳ ರೋಗಿಗಳಾಗಿ ದಾಖಲಾಗಿರುವವರಿಗೆ ಹಣ್ಣು ಹಂಪಲು ವಿತರಿಸಲಾಯಿತು.

ಈ ಸಂದರ್ಭದಲ್ಲಿ, ರಾಜಕೇಸರಿ ಸೇವಾ ಟ್ರಸ್ಟ್ (ರಿ.) ಕರ್ನಾಟಕ ಇದರ ಸಂಸ್ಥಾಪಕರಾದ ಶ್ರೀ ದೀಪಕ್ ಜಿ. ಬೆಳ್ತಂಗಡಿ, ಬೆಳ್ತಂಗಡಿ ತಾಲೂಕು ಆಸ್ಪತ್ರೆಯ ಪ್ರಸೂತಿ ತಜ್ಞರಾದ ಡಾ. ರಶ್ಮಿ, ತಾಲೂಕು ಕಾರ್ಯಕ್ರಮ ವ್ಯವಸ್ಥಾಪಕರಾದ ಶ್ರೀ ಅಜಯ್, ರಾಜಕೇಸರಿ ಸೇವಾ ಟ್ರಸ್ಟ್ (ರಿ.) ಬೆಳ್ತಂಗಡಿ ಇದರ ಅಧ್ಯಕ್ಷರಾದ ಶ್ರೀ ಜಗದೀಶ್ ಲಾಯಿಲ, ಸಂಘಟನಾ ಕಾರ್ಯದರ್ಶಿ ಶ್ರೀ ಪ್ರವೀಣ್ ಪೂಜಾರಿ, ಕೋಶಾಧಿಕಾರಿ ಶ್ರೀ ಪ್ರವೀಣ್ ಆಚಾರ್ಯ ಗುರುವಾಯನಕೆರೆ ಹಾಗೂ ಸದಸ್ಯರಾದ ಶ್ರೀ ಶ್ರೀನಿವಾಸ್ ಉಪಸ್ಥಿತರಿದ್ದರು.

590ಕ್ಕೂ ಹೆಚ್ಚು ಸೇವಾ ಕಾರ್ಯಗಳನ್ನು ನಡೆಸಿರುವ ರಾಜಕೇಸರಿ ಸೇವಾ ಟ್ರಸ್ಟ್ (ರಿ.) ಕರ್ನಾಟಕ ಸಂಸ್ಥೆಯ ಸೇವಾ ಕಾರ್ಯಗಳನ್ನು ಗುರುತಿಸಿ, ಈ ಬಾರಿಯ ಕನ್ನಡ ರಾಜ್ಯೋತ್ಸವ ಸಂದರ್ಭದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ನೀಡಿ ಗೌರವಿಸಲಾಗಿದೆ.