Wednesday, January 15, 2025
Homeಗದಗಗದಗ: ಲಾಡ್ಜ್​ನಲ್ಲಿ ಇಂಜಿನಿಯರ್ ಆತ್ಮಹತ್ಯೆ

ಗದಗ: ಲಾಡ್ಜ್​ನಲ್ಲಿ ಇಂಜಿನಿಯರ್ ಆತ್ಮಹತ್ಯೆ

ಗದಗ: ನಿರ್ಮಿತಿ ಕೇಂದ್ರದ ಇಂಜಿನಿಯರ್ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಗದಗ ಪಲ್ಲವಿ ಲಾಡ್ಜ್​ನಲ್ಲಿ ನಡೆದಿದೆ.

ಗದಗ ನಗರದ ನಿವಾಸಿಯಾಗಿರುವ ಶಂಕರಗೌಡ ಪಾಟೀಲ್ (54) ಆತ್ಮಹತ್ಯೆ ಮಾಡಿಕೊಂಡಿರುವ ಇಂಜಿನಿಯರ್. ಡಿ. 03ರಂದು ಬೆಳಗ್ಗೆ 7.30ಕ್ಕೆ ಮನೆಯಿಂದ ಹೊರಬಂದಿದ್ದ ಶಂಕರಗೌಡ ಪಾಟೀಲ್ ನಗರದ ಪಲ್ಲವಿ ಲಾಡ್ಜ್​ನ ರೂಮ್ ನಂಬರ್ 513ರಲ್ಲಿ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಶಂಕರಗೌಡ ಪಾಟೀಲ್ ಗುತ್ತಿಗೆ ಆಧಾರದಲ್ಲಿ ನೇಮಕಗೊಂಡಿದ್ದು, ಈ ಸಾವು ಹಲವು ಅನುಮಾನಕ್ಕೆ ಎಡೆಮಾಡಿಕೊಟ್ಟಿದೆ.

ಈ ಸಂಬಂಧ ಮೃತ ಸಹೋದರ ಕೃಷ್ಣಗೌಡ ಪ್ರತಿಕ್ರಿಯಿಸಿದ್ದು, ನೇಣು ಹಾಕಿ‌ ಕೊಲೆ ಮಾಡಿದ್ದಾರೆ. ಸಾಲ‌ ಇಲ್ಲ. ಸಾಕಷ್ಟು ಆಸ್ತಿ ಇದೆ. ಸಾಲಕ್ಕೆ ಆತ್ಮಹತ್ಯೆ ಮಾಡಿಕೊಳ್ಳುವನಲ್ಲ. ಸಾಲಕ್ಕೆ ಜಾಮೀನು ಆಗಿದ್ದ ಆ ವಿಷಯಕ್ಕಾದರೂ ಆಗಿರಬಹುದು. ಜಿಲ್ಲಾಧಿಕಾರಿಗಳ ಅಡಿಯಲ್ಲಿ ಕೆಲಸ‌ ಮಾಡುತ್ತಿದ್ದ. ಅಲ್ಲಿ ಪ್ರಮೋಶನಕ್ಕೆನಾದರೂ ವ್ಯತ್ಯಾಸ ಆಗಿದೆಯೋ ಗೊತ್ತಿಲ್ಲ. ಈ‌ ಮೂರು ವಿಷಯಕ್ಕೆ ಸಾವು ಅಂತ ಅನುಮಾನ ಇದೆ ಎಂದಿದ್ದಾರೆ.

RELATED ARTICLES
- Advertisment -
Google search engine

Most Popular