25 ದಿನಗಳನ್ನು ಪೂರೈಸಿದ `ಗಜಾನನ ಕ್ರಿಕೆಟರ್ಸ್’ ತುಳು ಸಿನಿಮಾ ಪ್ರೇಕ್ಷಕರಿಂದ ಉತ್ತಮ ಪ್ರಶಂಸೆ..!

0
41

ಮಂಗಳೂರು : ಪ್ರಜ್ವಲ್ ಫಿಲಂಸ್ ಲಾಂಛನದಲ್ಲಿ ತಯಾರಾದ ಪ್ರಜ್ವಲ್ ಶೆಟ್ಟಿ ನಿರ್ಮಾಣ ಹಾಗೂ ಕೀರ್ತನ್ ಭಂಡಾರಿ ನಿರ್ದೇಶನದ `ಗಜಾನನ ಕ್ರಿಕೆಟರ್ಸ್ (ಜಂತೊಟ್ಟು ಸಿನ್ಸ್ 1983)’ ತುಳು ಚಲನಚಿತ್ರವು ಯಶಸ್ವಿ 25 ದಿನಗಳನ್ನು ಪೂರೈಸಿ ಮುನ್ನಡೆದಿದೆ.

ಗಜಾನನ ಕ್ರಿಕೆಟರ್ಸ್ ಸಿನಿಮಾ ತುಳು ಭಾಷೆಯಲ್ಲಿನ ದೊಡ್ಡ ಬಜೆಟ್ ಚಿತ್ರವಾಗಿದ್ದು, ಕ್ರಿಕೆಟ್ ಮತ್ತು ಆಟಗಾರರ ಬದುಕಿನ ಹಿನ್ನಲೆ ಆಧಾರಿತ ಕತೆ ಹೊಂದಿದೆ. ಚಿತ್ರದಲ್ಲಿ ಹಾಸ್ಯ, ಪ್ರೇಮಪೂರಿತ ಭಾವನೆಗಳು ಮತ್ತು ಸಮಾಜಮುಖಿ ಸಂದೇಶವಿರುವ ಬಿಗು ಕತೆ ಒಳಗೊಂಡಿದೆ.

ಕೀರ್ತನ್ ಭಂಡಾರಿ ಅವರು ಕಥೆ, ಚಿತ್ರಕಥೆ ಬರೆದು ಮೊದಲ ಬಾರಿಗೆ ನಿರ್ದೇಶನ ಮಾಡಿದ್ದಾರೆ. ಸಿನಿಮಾವನ್ನು ಪ್ರೇಕ್ಷಕರು ಬಹುವಾಗಿ ಮೆಚ್ಚಿಕೊಂಡು ಇಷ್ಟ ಪಟ್ಟಿದ್ದಾರೆ. ಸಿನಿಮಾದಲ್ಲಿ ಕುಸೇಲ್ದರಸೆ ನವೀನ್ ಡಿ ಪಡೀಲ್ ಮತ್ತು ಯುವ ನಟ ವಿನೀತ್ ಕುಮಾರ್ ಅವರು ತಂದೆ ಮಗನ ಪಾತ್ರದಲ್ಲಿ ಮನೋಜ್ಞವಾಗಿ ಅಭಿನಯಿಸಿ ಪ್ರೇಕ್ಷಕರ ಮನಗೆದಿದ್ದಾರೆ. ಅರವಿಂದ ಬೋಳಾರ್, ಭೋಜರಾಜ್ ವಾಮಂಜೂರು, ದೀಪಕ್ ರೈ ಪಾಣಾಜೆ, ಉಮೇಶ್ ಮಿಜಾರ್, ಪ್ರಸನ್ನ ಶೆಟ್ಟಿ ಬೈಲೂರು, ಸಂದೀಪ್ ಶೆಟ್ಟಿ ಮಾಣಿಬೆಟ್ಟು ಮೊದಲಾದವರು ಹಾಸ್ಯ ವಿಭಾಗದಲ್ಲಿ ಭರ್ಜರಿಯಾಗಿ ಮನರಂಜನೆ ಒದಗಿಸಿದ್ದಾರೆ.

ಪುಷ್ಪರಾಜ್ ಬೊಳ್ಳಾರ್, ಪ್ರಕಾಶ್ ತುಮಿನಾಡು, ಅನ್ವಿತಾ ಸಾಗರ್, ಸಮತಾ ಅಮೀನ್, ವಾಲ್ಟರ್ ನಂದಳಿಕೆ, ಸವೋತ್ತಮ ಶೆಟ್ಟಿ ಅಬುದಾಭಿ, ರೂಪ ವರ್ಕಾಡಿ, ಮೊದಲಾದವರು ಅಭಿನಯಿಸಿದ್ದಾರೆ.

ಈ ಚಿತ್ರದಲ್ಲಿ ನಿರ್ಮಾಪಕ ಪ್ರಜ್ವಲ್ ಶೆಟ್ಟಿ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ. ವಿನುತ್ ಕೆ. ಸುವರ್ಣ ಅವರ ಛಾಯಾಗ್ರಹಣ, ಸುಜಯ್ ಶಿವರಾಮ್ ಹಾಗೂ ಕೌಶಿಕ್ ಭಂಡಾರಿ ಅವರ ಸಂಕಲನ ಇದೆ. ಗೀತಾ ಸಾಹಿತ್ಯವನ್ನು ಕೀರ್ತನ್ ಭಂಡಾರಿ, ಸೃಜನ್ ಮಾನವ್, ಶ್ರೀನಿಧಿ ಶೆಟ್ಟಿ ರಚಿಸಿದ್ದಾರೆ.

ಸಹ ನಿರ್ಮಾಪಕರು: ರೋಹನ್ ಪಿರೇರ ವಾಮಂಜೂರು ಮತ್ತು ಸಂತೋಷ್ ಲಾಡ್, ಸಂಗೀತ: ಸೃಜನ್ ಕುಮಾರ್ ತೋನ್ಸೆ. ಗಜಾನನ ಕ್ರಿಕೆಟರ್ಸ್ ಕರಾವಳಿ ಜಿಲ್ಲೆಯಾದ್ಯಂತ ಯಶಸ್ವಿ ಪ್ರದರ್ಶನಗಳನ್ನು ಕಾಣುತ್ತಿದೆ. ಕಾರ್ಕಳದಲ್ಲಿ ಇತ್ತೀಚೆಗೆ ಆರಂಭಗೊಂಡ ಭಾರತ್ ಸಿನಿಮಾಸ್ ನಲ್ಲಿ “ಗಜಾನನ ಕ್ರಿಕೆಟರ್ಸ್” ಸಿನಿಮಾಕ್ಕೆ ಭರ್ಜರಿ ಆರಂಭ ದೊರಕಿದೆ.‌

ಬೆಂಗಳೂರಿನಲ್ಲಿ ಸಿನಿಮಾ ಬಿಡುಗಡೆಗೊಂಡು ಯಶಸ್ವಿ ಪ್ರದರ್ಶನ ಕಾಣುತ್ತಿದೆ. ಮುಂದಿನ ದಿನಗಳಲ್ಲಿ ಮುಂಬೈ ಸೇರಿದಂತೆ ಬೇರೆ ಬೇರೆ ಕಡೆಗಳಲ್ಲಿ ಸಿನಿಮಾ ಬಿಡುಗಡೆಗೆ ಚಿತ್ರ ತಂಡ ಸಿದ್ದತೆ ನಡೆಸಿದೆ.

LEAVE A REPLY

Please enter your comment!
Please enter your name here