ಮಟ್ಟಾರ್ : ಹಲವಾರು ವರ್ಷಗಳಿಂದ ಧಾರ್ಮಿಕ ಹಾಗೂ ಸಾಮಾಜಿಕ ಕಾರ್ಯಗಳಿಗೆ ಬಳಕೆಯಾಗುತ್ತಿದ್ದ ಕಾರ್ಯಾಲಯದ ದುರಸ್ತಿ ಕಾಮಗಾರಿಗಳು ಸಜ್ಜನ ಬಂಧುಗಳ ತನು, ಮನ, ಧನ ಸಹಕಾರದೊಂದಿಗೆ ಯಶಸ್ವಿಯಾಗಿ ಪೂರ್ಣಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ವಿಶ್ವ ಹಿಂದೂ ಪರಿಷದ್, ಬಜರಂಗದಳ, ಮಾತೃಶಕ್ತಿ ಹಾಗೂ ದುರ್ಗಾವಾಹಿನಿ ಮಟ್ಟಾರ್ ವತಿಯಿಂದ ಗಣಹೋಮ ಪೂಜಾ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.
ಮಾಣಿಬೆಟ್ಟು ಶ್ರೀ ವಿಷ್ಣುಮೂರ್ತಿ ಉಪಾಧ್ಯಾಯರ ನೇತೃತ್ವದಲ್ಲಿ ಸೆಪ್ಟೆಂಬರ್ 13ರಂದು ಆದಿತ್ಯವಾರ ಗಣಹೋಮ ಪೂಜೆ ನಡೆಯಲಿದೆ. ಬೆಳಿಗ್ಗೆ 7ರಿಂದ 8.30ರವರೆಗೆ ಗಣಹೋಮ ನಡೆಯಲಿದ್ದು, ಬಳಿಕ 8.30ರಿಂದ ಪ್ರಸಾದ ವಿತರಣೆ ಹಾಗೂ ಉಪಾಹಾರ ವ್ಯವಸ್ಥೆ ಮಾಡಲಾಗಿದೆ.
ಈ ಧಾರ್ಮಿಕ ಕಾರ್ಯಕ್ರಮಕ್ಕೆ ಬಂಧು-ಮಿತ್ರರೊಂದಿಗೆ ಆಗಮಿಸಿ ಪೂಜಾ ಕಾರ್ಯದಲ್ಲಿ ಭಾಗವಹಿಸಿ ಶ್ರೀದೇವರ ಕೃಪೆಗೆ ಪಾತ್ರರಾಗುವಂತೆ ಆಯೋಜಕರು ಆದರಪೂರ್ವಕವಾಗಿ ಆಹ್ವಾನಿಸಿದ್ದಾರೆ.

