ಚಿಕ್ಕಮಗಳೂರು: ಗಣಪತಿ ವಿಸರ್ಜನೆ ವೇಳೆ ಕುಣಿಯುವ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ಯುವಕನೊಬ್ಬನ ಮೇಲೆ ಬ್ಲೇಡ್‍ನಿಂದ ಹಲ್ಲೆ ನಡೆಸಿ, ಕಿವಿ ಕತ್ತರಿಸಿದ ಘಟನೆ ಗವನಗಳ್ಳಿಯಲ್ಲಿ ನಡೆದಿದೆ.
ಹಲ್ಲೆಗೊಳಗಾದ ಯುವಕನನ್ನು ಗೌತಮ್ (23) ಎಂದು ಗುರುತಿಸಲಾಗಿದೆ. ತಿಮ್ಮರಾಜ್ ಅರಸ್ ಎಂಬಾತ ಗೌತಮ್ ಎಂಬಾತನ ಕಿವಿ ಕತ್ತರಿಸಿ ಗಾಯಗೊಳಿಸಿದ್ದಾನೆ. ಅಲ್ಲದೆ ಗೌತಮ್‌ಗೆ ಮುಖದಿಂದ ಕತ್ತಿನ ಭಾಗದವರೆಗೆ ತೀವ್ರ ಗಾಯಗಳಾಗಿವೆ ಎಂದು ತಿಳಿದುಬಂದಿದೆ.
ಗಣಪತಿ ವಿಸರ್ಜನೆ ಮೆರವಣಿಗೆಯ್ಲಿ ಕುಣಿಯುವ ವೇಳೆ ಗುಂಪಿನ ಮಧ್ಯೆ ತಳ್ಳಾಟ ನಡೆದಿದ್ದು, ಈ ವಿಷಯಕ್ಕೆ ಸಂಬಂಧಿಸಿ ಗಲಾಟೆ ನಡೆದಿದೆ. ಈ ವೇಳೆ ಯುವಕನ ಮುಖದ ಮೇಲೆ ಬ್ಲೇಡ್‍ನಿಂದ ಮನಸ್ಸೋ ಇಚ್ಛೆ ಹಲ್ಲೆ ನಡೆಸಲಾಗಿದೆ. ಗಾಯಾಳು ಗೌತಮ್‍ಗೆ ಮಂಗಳೂರಿನ ಆಸ್ಪತ್ರೆಯೊಂದರಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಗಣಪತಿ ವಿಸರ್ಜನೆ ಮೆರವಣಿಗೆಯಲ್ಲಿ ಗಲಾಟೆ | ಬ್ಲೇಡ್‌ನಿಂದ ದಾಳಿ; ಯುವಕನ ಕಿವಿ ಕಟ್; ಮಂಗಳೂರು ಆಸ್ಪತ್ರೆಯಲ್ಲಿ ದಾಖಲು
RELATED ARTICLES