ಕಾಸರಗೋಡು : ನಗರದ ಕನ್ನಡ ಭವನ ಗ್ರಂಥಾಲಯದಲ್ಲಿ ಭಾನುವಾರ (ಜು. 26) ನಡೆಯಲಿರುವ ಕರ್ನಾಟಕ–ಗಡಿನಾಡು ಕನ್ನಡ ಸಮ್ಮೇಳನದ ಯಶಸ್ಸಿಗಾಗಿ ಹಾಗೂ ನೂತನವಾಗಿ ನಿರ್ಮಿಸಲಾದ ಉಚಿತ ವಸತಿ ಸೌಕರ್ಯದ ಕೊಠಡಿ ಸಮರ್ಪಣೆ ಪ್ರಯುಕ್ತ ಶನಿವಾರ ಭಕ್ತಿಭಾವದಿಂದ ಗಣಪತಿ ಯಾಗ ನೆರವೇರಿತು.

ಸಮ್ಮೇಳನವು ಯಶಸ್ವಿಯಾಗಿ ನಡೆಯಲು ಭಗವಂತನ ಅನುಗ್ರಹ ದೊರೆಯಲಿ ಎಂಬ ಉದ್ದೇಶದಿಂದ ಆಯೋಜಿಸಲಾದ ಈ ವಿಶೇಷ ಪ್ರಾರ್ಥನಾ ಕಾರ್ಯಕ್ರಮದಲ್ಲಿ ಯಾಗ, ಪೂಜೆ ಹಾಗೂ ಧಾರ್ಮಿಕ ವಿಧಿವಿಧಾನಗಳು ನೆರವೇರಿದವು.
ಕಾರ್ಯಕ್ರಮದಲ್ಲಿ ಸಮ್ಮೇಳನ ಸಮಿತಿ ಅಧ್ಯಕ್ಷ ಡಾ. ಕೆ. ಎನ್. ವೆಂಕಟ್ರಮಣ ಹೊಳ್ಳ, ಸಂಘಟನಾ ಕಾರ್ಯದರ್ಶಿ ಪ್ರದೀಪ್ ನಾಯ್ಕ್, ಲೋಕೇಶ್ ಶೆಟ್ಟಿ, ಕಾರ್ಯದರ್ಶಿ ವಸಂತ್ ಕೆರೆಮನೆ ಸೇರಿದಂತೆ ಸಮ್ಮೇಳನ ಸಮಿತಿಯ ಪದಾಧಿಕಾರಿಗಳು ಹಾಗೂ ಕನ್ನಡಾಭಿಮಾನಿಗಳು ಉಪಸ್ಥಿತರಿದ್ದರು.

