
ಶ್ರೀ ವೆಂಕಟರಮಣ ಸ್ವಾಮಿ ಆಂಗ್ಲ ಮಾಧ್ಯಮ ಶಾಲೆ ವಿದ್ಯಾಗಿರಿ ಬಂಟ್ವಾಳ, ಇಲ್ಲಿ ಅಕ್ಟೋಬರ್ 2 ರಂದು ರಾಷ್ಟçಪಿತ ಮಹಾತ್ಮ ಗಾಂಧೀಜಿ ಮತ್ತು ಲಾಲ್ ಬಹುದ್ದೂರ್ ಶಾಸ್ತಿçರವರ ಜನ್ಮದಿನವನ್ನು ವಿನೂತನವಾಗಿ ಅರ್ಥಪೂರ್ಣವಾಗಿ ಆಚರಿಸಲಾಯಿತು.
ಕಾರ್ಯಕ್ರಮದ ಆರಂಭದಲ್ಲಿ ರಾಷ್ಡçಪಿತ ಗಾಂಧೀಜಿ , ಲಾಲ್ ಬಹುದ್ದೂರ್ ಶಾಸ್ತಿç ಯವರ ಭಾವ ಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಲಾಯಿತು. ಬಳಿಕ ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಸ್ವಚ್ಚತಾ ಕಾರ್ಯದಲ್ಲಿ ಪಾಲ್ಗೋಂಡು ‘ಸ್ವಚ್ಚತೆಯೇ ಸೇವೆ’ ಎಂಬ ಸಂದೇಶವನ್ನು ಸಾರಿದರು. ಕಾರ್ಯಕ್ರಮದಲ್ಲಿ ಗಾಂಧೀಜಿಯವರ ಜೀವನ , ಸರಳತೆ , ಸತ್ಯ , ಅಹಿಂಸೆ ಹಾಗೂ ದೇಶದ ಸ್ವಾತಂತ್ರö್ಯ ಹೋರಾಟಕ್ಕೆ ಅವರ ಕೊಡುಗೆಯ ಕುರಿತು ವಿದ್ಯಾರ್ಥಿಗಳಿಗೆ ತಿಳಿಸಲಾಯಿತು.
ವಿದ್ಯಾರ್ಥಿಗಳು ಗಾಂಧಿ ತತ್ವ ಆದರ್ಶಗಳನ್ನು ಶಿಸ್ತನ್ನು, ಸ್ವಚ್ಚತೆ, ಮಾನವೀಯ ಮೌಲ್ಯಗಳನ್ನು ಬೆಳೆಸಿಕೊಳ್ಳ ಬೇಕೆಂದು ಶಾಲೆಯ ಮುಖ್ಯೋಪಾಧ್ಯಾಯರಾದ ಹರಿಪ್ರಸಾದ್ ಕರೆ ನೀಡಿದರು. ವಿದ್ಯಾರ್ಥಿಗಳಿಂದ ಭಾಷಣ , ದೇಶ ಭಕ್ತಿ ಗೀತೆ, ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು. ಪ್ರಾಥಮಿಕ ಶಾಲಾ ಮುಖ್ಯೋಪಾಧ್ಯಾಯರಾದ ಚೈತ್ರ ಶೆಟ್ಟಿ ಮತ್ತು ಪೂರ್ವಪ್ರಾಥಮಿಕ ವಿಭಾಗದ ಸಂಯೋಜಕಿಯಾದ ವೀಣಾ ವೇದಿಕೆಯಲ್ಲಿ ಉಪಸ್ಥಿತರಿದ್ದರು ಕಾರ್ಯಕ್ರಮದ ಕೊನೆಯಲ್ಲಿ ಸಿಹಿತಿಂಡಿ ವಿತರಿಸಲಾಯಿತು.
