ಬಂಟ್ವಾಳ : ಶ್ರೀ ವೆಂಕಟರಮಣ ಸ್ವಾಮಿ ಮಹಾವಿದ್ಯಾಲಯ, ವಿದ್ಯಾಗಿರಿ ಬಂಟ್ವಾಳದಲ್ಲಿ ಗಾಂಧಿ ಜಯಂತಿಯನ್ನು ಆಚರಿಸಲಾಯಿತು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಕಾಲೇಜಿನ ಪ್ರಾಂಶುಪಾಲ ಪ್ರೊ. ಎಂ.ಡಿ. ಮಂಚಿ ಅವರು, ಸತ್ಯ, ಅಹಿಂಸೆ, ಧರಣಿ, ಅನ್ನಸತ್ಯಾಗ್ರಹ, ಸ್ವದೇಶಿ ಚಳವಳಿ, ಸಹೋದರತೆ, ಸಮಾನತೆ, ಸರಳತೆ ಹಾಗೂ ಜಾತ್ಯತೀತತೆಯಂತಹ ಮೌಲ್ಯಗಳನ್ನು ಜಗತ್ತಿಗೆ ಪರಿಚಯಿಸಿದ ಮಹಾತ್ಮ ಗಾಂಧೀಜಿ ಭಾರತದ ಸ್ವಾತಂತ್ರ್ಯ ಸಂಗ್ರಾಮದ ಮುಂಚೂಣಿ ನಾಯಕರಾಗಿದ್ದರು ಎಂದರು.
ಇಂದಿನ ಗೊಂದಲಮಯ ಹಾಗೂ ಅಶಾಂತಿಯ ವಾತಾವರಣದಲ್ಲಿ ಭಾರತ ಮಾತ್ರವಲ್ಲದೆ ಇಡೀ ಜಗತ್ತಿಗೆ ಗಾಂಧೀಜಿಯವರ ತತ್ವಗಳು, ಬೋಧನೆಗಳು ಹಾಗೂ ಚಿಂತನೆಗಳು ಅಗತ್ಯವಾಗಿವೆ ಎಂದು ಅವರು ಹೇಳಿದರು.
ಪುಷ್ಪಾರ್ಚನೆಯೊಂದಿಗೆ ಕಾರ್ಯಕ್ರಮ ಆರಂಭಗೊಂಡಿತು. ವಾಣಿಜ್ಯ ವಿಭಾಗದ ಮುಖ್ಯಸ್ಥೆ ಶ್ರೀಮತಿ ಅಖಿಲಾ ಪೈ ಸ್ವಾಗತಿಸಿದರು. ಕನ್ನಡ ವಿಭಾಗದ ಮುಖ್ಯಸ್ಥ ಕೆ. ಶಿವಣ್ಣ ಪ್ರಭು ವಂದಿಸಿದರು. ಡಾ. ಕಾಶಿನಾಥ ಶಾಸ್ತ್ರಿ ಕಾರ್ಯಕ್ರಮ ನಿರೂಪಿಸಿದರು.
ಕಾಲೇಜಿನ ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

