ವಿದ್ಯಾದಾಯಿನೀ ಪ್ರೌಢಶಾಲೆಯಲ್ಲಿ ಗಾಂಧೀಜಿ–ಲಾಲ್ ಬಹದ್ದೂರ್ ಶಾಸ್ತ್ರಿ ಜನ್ಮ ದಿನಾಚರಣೆ

0
12

ವಿದ್ಯಾದಾಯಿನೀ ಪ್ರೌಢಶಾಲೆಯಲ್ಲಿ ಗಾಂಧೀಜಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿ ಜನ್ಮ ದಿನಾಚರಣೆ. ಹಿಂದೂ ವಿದ್ಯಾದಾಯಿನೀ ಸಂಘದ ಆಡಳಿತಕ್ಕೆ ಒಳಪಟ್ಟ ಅನುದಾನಿತ ವಿದ್ಯಾದಾಯಿನೀ ಪ್ರೌಢಶಾಲೆಯಲ್ಲಿ ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಮತ್ತು ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಜನ್ಮ ದಿನಾಚರಣೆಯನ್ನು ಅತ್ಯಂತ ಶ್ರದ್ಧಾಭಕ್ತಿಯಿಂದ ಅರ್ಥಪೂರ್ಣವಾಗಿ ಆಚರಿಸಲಾಯಿತು .

ಶಾಲಾ ವಿದ್ಯಾರ್ಥಿಗಳ ಪ್ರಾರ್ಥನೆಯೊಂದಿಗೆ ಕಾರ್ಯಕ್ರಮ ಆರಂಭವಾಗಿದ್ದು , ಅಧ್ಯಕ್ಷತೆಯನ್ನು ಹಿಂದೂ ವಿದ್ಯಾದಾಯಿನೀ ಸಂಘದ ಸಾರ್ವಜನಿಕ ಸಂಪರ್ಕ ಅಧಿಕಾರಿ ಮತ್ತು ಶಾಲಾ ಸಂಚಾಲಕರಾದ ಸುಧಾಕರಾವ್ ಪೇಜಾವರ ವಹಿಸಿದ್ದರು . ಶಾಲಾ ಮುಖ್ಯೋಪಾಧ್ಯಾಯರಾದ ದಿವಸ್ಪತಿ ಅವರು ಎಲ್ಲರನ್ನು ಸ್ವಾಗತಿಸಿದರು .

ಮಹಾತ್ಮ ಗಾಂಧೀಜಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು . ವೇದಿಕೆಯಲ್ಲಿ ಮುಖ್ಯ ಅತಿಥಿಗಳಾಗಿ ನಮ್ಮ ಶಾಲೆಯ ಹಳೆ ವಿದ್ಯಾರ್ಥಿ ಹಾಗೂ ಶ್ರೀ ಬ್ರಹ್ಮ ಬೈದರ್ಕಳ ಗರಡಿ ಕ್ಷೇತ್ರ ಕಂಕನಾಡಿ ಮಂಗಳೂರಿನ ಅರ್ಚಕರಾದ ಗುರುಪ್ರಸಾದ್ ಶಾಂತಿ, ವಿದ್ಯಾದಾಯಿನಿ ಹಳೆ ವಿದ್ಯಾರ್ಥಿ ಸಂಘದ ಉಪಾಧ್ಯಕ್ಷರಾದ ಸಾವಿತ್ರಿ , ಮಂಗಳೂರಿನ ಎಸ್ ಎಲ್ ಶೇಟ್ ಮಾಲೀಕರಾದ ರವೀಂದ್ರ ಶೇಟ್ , ಶಾಲಾ ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷರಾದ ಶ್ರೀಹರಿ ಎಂ ಉಪಸ್ಥಿತರಿದ್ದರು.

9ನೇ ತರಗತಿ ವಿದ್ಯಾರ್ಥಿ ಸಿದ್ದಾರ್ಥ ಗಾಂಧೀಜಿ ಮತ್ತು ಶಾಸ್ತ್ರೀಜಿ ಅವರ ಜೀವನ ಆದರ್ಶಗಳನ್ನು ಯಾವ ರೀತಿ ನಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂಬುದರ ಬಗ್ಗೆ ಭಾಷಣ ಮಾಡಿದನು ಮತ್ತು 10ನೇ ತರಗತಿ ವಿದ್ಯಾರ್ಥಿನಿಯರು ದೇಶಭಕ್ತಿ ಬಿಂಬಿಸುವ ಸಮೂಹ ಗೀತೆ ಹಾಡಿದರು . ಮುಖ್ಯ ಅತಿಥಿಗಳಾದ ಶ್ರೀ ಗುರುಪ್ರಸಾದ್ ಶಾಂತಿ ಅವರು ಗಾಂಧೀಜಿಯವರ ಸತ್ಯ, ಅಹಿಂಸೆ, ಸರಳತೆ ಮತ್ತು ಸ್ವಚ್ಛತಾ ತತ್ವಗಳು ಇಂದಿಗೂ ಅನುಕರಣೀಯ ಮತ್ತು ಶಾಸ್ತ್ರೀಜಿ ಅವರ ವ್ಯಕ್ತಿತ್ವ ಎಲ್ಲರಿಗೂ ಮಾದರಿ ಎಂದು ವಿದ್ಯಾರ್ಥಿಗಳಿಗೆ ತಿಳಿಸಿದರು .

ರವೀಂದ್ರ ಶೇಟ್ ಅವರು ಇಬ್ಬರು ಮಹಾನ್ ನಾಯಕರು ದೇಶಕ್ಕೆ ಸಮರ್ಪಿಸಿದ ಕೊಡುಗೆ ಅಪಾರ, ಅದನ್ನು ಉಳಿಸಿ ಬೆಳೆಸುವುದು ನಮ್ಮ ಆದ್ಯ ಕರ್ತವ್ಯ ಎಂದು ಕರೆ ನೀಡಿದರು . ಮತ್ತೋರ್ವ ಮುಖ್ಯ ಅತಿಥಿ ಶ್ರೀಮತಿ ಸಾವಿತ್ರಿ ಅವರು ವಿದ್ಯಾರ್ಥಿಗಳು ಗಾಂಧೀಜಿಯವರ ಆದರ್ಶಗಳನ್ನು ಪಾಲಿಸಿಕೊಂಡು ಸತ್ಪ್ರಜೆಗಳಾಗಿ ಬೆಳೆಯಲು ಯಾವೆಲ್ಲ ಕ್ರಮಗಳನ್ನು ಅನುಸರಿಸಬೇಕು ಎಂದು ತಿಳಿಸಿದರು .

ಕಾರ್ಯಕ್ರಮದ ಅಧ್ಯಕ್ಷರಾದ ಸುಧಾಕರ ರಾವ್ ಪೇಜಾವರ ಅವರು ದಿನದ ಮಹತ್ವದ ಬಗ್ಗೆ ವಿವರಿಸುತ್ತಾ ಮಹಾತ್ಮ ಗಾಂಧೀಜಿ ಮತ್ತು ಶಾಸ್ತ್ರೀಜಿ ಅವರ ಜೀವನದ ಹಲವು ಘಟನೆಗಳನ್ನು ಉಲ್ಲೇಖಿಸುತ್ತಾ ವಿದ್ಯಾರ್ಥಿಗಳು ಅವರ ಹಾದಿಯನ್ನು ಅನುಸರಿಸಲು ತಿಳಿ ಹೇಳಿದರು . ಈ ಸಂದರ್ಭದಲ್ಲಿ ಪ್ರಗತಿಪರ ಸೇವಾ ಸಂಸ್ಥೆ ಮಂಡ್ಯ ಇಲ್ಲಿ ನಡೆಸಲಾದ 22ನೇ ವಷ೯ದ ರಾಜ್ಯಮಟ್ಟದ ಚಿತ್ರಕಲಾ ಸ್ಪರ್ಧೆಯಲ್ಲಿ ಭಾಗವಹಿಸಿ ಬಹುಮಾನ ಪಡೆದ ಸುಮಾರು 40 ವಿದ್ಯಾರ್ಥಿಗಳನ್ನು ಅಭಿನಂದಿಸಲಾಯಿತು.

ಕಾರ್ಯಕ್ರಮದಲ್ಲಿ ಶಾಲಾನಿವೃತ್ತ ಮುಖ್ಯೋಪಾಧ್ಯಾಯರು ಗಳಾದ ಶಶಿಕಲಾ , ರೇವತಿ, ವಿದ್ಯಾದಾಯಿನೀ ಹಾಗೂ ಹಳೆ ವಿದ್ಯಾರ್ಥಿ ಸಂಘದ ಸದಸ್ಯರಾದ ಪಿ ವಿ ಗಿರೀಶ್, ಉಮಾ , ರಕ್ಷಕ ಶಿಕ್ಷಕ ಸಂಘದ ಸದಸ್ಯರುಗಳು, ಪೋಷಕರು, ಶಿಕ್ಷಕ ಶಿಕ್ಷಕೇತರ ಸಿಬ್ಬಂದಿ ವರ್ಗದವರು ಹಾಜರಿದ್ದು, ರಾಷ್ಟ್ರಗೀತೆಯೊಂದಿಗೆ ಕಾರ್ಯಕ್ರಮ ಯಶಸ್ವಿಯಾಗಿ ಮುಕ್ತಾಯಗೊಂಡಿತು .

ಕಾರ್ಯಕ್ರಮವನ್ನು ಸಹ ಶಿಕ್ಷಕರಾದ ಮಹೇಶ್ ನಿರ್ವಹಿಸಿದರು ಹಾಗೂ ವಂದನಾರ್ಪಣೆ ಹಿರಿಯ ಶಿಕ್ಷಕಿಯಾದ ಪುಷ್ಪ ಕೆ ನೀಡಿದರು. ಕೊನೆಯಲ್ಲಿ ವಿದ್ಯಾರ್ಥಿಗಳು ಹಾಗೂ ಶಿಕ್ಷಕ ಶಿಕ್ಷಕೇತರ ಸಿಬ್ಬಂದಿಗಳಿಂದ ಶಾಲಾ ವಠಾರ ಸ್ವಚ್ಛತಾ ಕಾರ್ಯ ನಡೆಸಲಾಯಿತು .