ದೃಶ್ಯ ಸಿಸಿ ಕ್ಯಾಮರದಲ್ಲಿ ಸೆರೆಯಾದ ಗಾಂಧಿನಗರ ಅಕ್ಸಿಡೆಂಟ್

0
177

ಮೂಡುಬಿದಿರೆ: ಗಾಂಧಿನಗರದಲ್ಲಿ ಶುಕ್ರವಾರ ರಾತ್ರಿ ಬೈಕ್ ಅಪಘಾತದ ಭೀಕರ ದೃಶ್ಯ ಸಿಸಿ ಕ್ಯಾಮರದಲ್ಲಿ ಸೆರೆಯಾಗಿದ್ದು ಕೊಪ್ಪಳ ಜಿಲ್ಲೆಯ ಕುಕ್ಕನೂರು ಗ್ರಾಮದ ಮುತ್ತುರಾಜ ಹಡಪದ (26) ಮೃತಪಟ್ಟಿದ್ದಾರೆ. ಅವರು ಮೂಡುಬಿದಿರೆಯ ವಿದ್ಯಾಗಿರಿಯಲ್ಲಿ ಕ್ಷೌರಿಕ ವೃತ್ತಿ ಮಾಡಿಕೊಂಡಿದ್ದರು. ಶುಕ್ರವಾರ ರಾತ್ರಿ ಗಾಂಧಿನಗರದಲ್ಲಿರುವ ಹೋಟೆಲ್‌ಗೆ ಊಟಕ್ಕಾಗಿ ರಸ್ತೆ ದಾಟುತ್ತಿದ್ದ ಸಂದರ್ಭದಲ್ಲಿ, ವೇಗವಾಗಿ ಬಂದ ಬೈಕ್ ಅವರಿಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಮುತ್ತುರಾಜ ಅವರು ರಸ್ತೆಗೆ ಎಸೆಯಲ್ಪಟ್ಟು ಗಂಭೀರವಾಗಿ ಗಾಯಗೊಂಡು ಸಾವನ್ನಪ್ಪಿದ್ದಾರೆ. ಬೈಕ್ ಚಾಲಕ ಮುರಳಿ ಚೌಹಣ್ ಎಂಬವರ ವಿರುದ್ಧ ಮೂಡುಬಿದಿರೆ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

LEAVE A REPLY

Please enter your comment!
Please enter your name here