ಉಡುಪಿ: ಶ್ರೀ ಗಣೇಶೋತ್ಸವ ಸಮಿತಿ, ಪೊಲಿಪು ವತಿಯಿಂದ ಸೆ.6 ಮತ್ತು ಸೆ.7ರಂದು 21ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ ನಡೆಯಲಿದೆ. ಶ್ರೀ ಲಕ್ಷ್ಮೀನಾರಾಯಣ ಸಭಾಭವನದ ಶಿವ ಕೈಲಾಸ ಮಂಟಪದಲ್ಲಿ ಕಾರ್ಯಕ್ರಮ ನಡೆಯಲಿದೆ.
ಸೆ.6ರಂದು ಧಾರ್ಮಿಕ ಸಭಾ ಕಾರ್ಯಕ್ರಮ ನಡೆಯಲಿದೆ. ಕಾಪು ಶಾಸಕ ಸುರೇಶ್ ಶೆಟ್ಟಿ ಗುರ್ಮೆ ಅಧ್ಯಕ್ಷತೆ ವಹಿಸಲಿದ್ದಾರೆ. ಶಾಸಕ ಯಶ್‌ಪಾಲ್ ಸುವರ್ಣ, ಮಾಜಿ ಶಾಸಕ ವಿನಯ ಕುಮಾರ್ ಸೊರಕೆ, ಮಾಜಿ ಶಾಸಕ ಲಾಲಾಜಿ ಆರ್. ಮೆಂಡನ್, ಜೆಡಿಎಸ್ ಜಿಲ್ಲಾಧ್ಯಕ್ಷ ಬಾಲಾಜಿ ಯೋಗೀಶ್ ಶೆಟ್ಟಿ ಸೇರಿ ಹಲವು ಗಣ್ಯರು ಸಭೆಯಲ್ಲಿ ಭಾಗವಹಿಸಲಿದ್ದಾರೆ. ಸಂಜೆ 6ರಿಂದ ಸ್ಥಳೀಯರಿಂದ ಮತ್ತು ಶಾಲಾ ಮಕ್ಕಳಿಂದ ನೃತ್ಯ ವೈಭವ ಕಾರ್ಯಕ್ರಮ ನಡೆಯಲಿದೆ. ರಾತ್ರಿ 8 ಗಂಟೆಗೆ ಅನ್ನಸಂತರ್ಪಣೆ ನಡೆಯಲಿದೆ. ರಾತ್ರಿ 9 ಗಂಟೆಗೆ ಲೆಕ್ಕ ದೀಪೆರ್ ತುಳು ನಾಟಕ ನಡೆಯಲಿದೆ.
ಸೆ.7ರಂದು ಶನಿವಾರ ಬೆಳಿಗ್ಗೆ 9.30ಕ್ಕೆ ಸಾಮೂಹಿಕ ಪ್ರಾರ್ಥನೆ ಸಹಿತ ಧಾರ್ಮಿಕ ವಿಧಿವಿಧಾನಗಳು ನಡೆದು, 10 ಗಂಟೆಗೆ ಗಣೇಶನ ವಿಗ್ರಹ ಪ್ರತಿಷ್ಠಾಪನೆಯಾಗಲಿದೆ. 12.30ಕ್ಕೆ ಮಹಾಪೂಜೆ ನಡೆಯಲಿದೆ. 4.30ರಿಂದ ವಿಸರ್ಜನಾ ಶೋಭಾ ಯಾತ್ರೆ ನಡೆಯಲಿದೆ.