Friday, February 14, 2025
Homeಬಂಟ್ವಾಳಬಂಟ್ವಾಳದ ವಿವಿಧ ಕಡೆಗಳಲ್ಲಿ ಗಣೇಶೋತ್ಸವ ಸಂಭ್ರಮ

ಬಂಟ್ವಾಳದ ವಿವಿಧ ಕಡೆಗಳಲ್ಲಿ ಗಣೇಶೋತ್ಸವ ಸಂಭ್ರಮ

ಜಕ್ರಿಬೆಟ್ಟು: ೨೧ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ

ಬಂಟ್ವಾಳ: ಇಲ್ಲಿನ ಜಕ್ರಿಬೆಟ್ಟು ಸಾರ್ವಜನಿಕ ಶ್ರೀ ಗಣೇಶೋತ್ಸವ ಆಚರಣಾ ಸಮಿತಿ ವತಿಯಿಂದ ೨೧ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವವು ಜಕ್ರಿಬೆಟ್ಟು ರಾಷ್ಟ್ರೀಯ ಹೆದ್ದಾರಿ ಬಳಿ ಇದೇ ೭ರಿಂದ ೧೧ ರ ತನಕ ನಡೆಯಲಿದೆ ಎಂದು ಸಮಿತಿ ಗೌರವಾಧ್ಯಕ್ಷ, ಮಾಜಿ ಸಚಿವ ಬಿ.ರಮಾನಾಥ ರೈ ತಿಳಿಸಿದ್ದಾರೆ.
ಬಂಟ್ವಾಳದ ಹಬ್ಬವಾಗಿ ಎಲ್ಲರನ್ನೂ ಒಂದಾಗಿ ಬೆಸೆಯುವ ಸೌಹಾರ್ದತೆಯ ಈ ಉತ್ಸವದಲ್ಲಿ ಪ್ರತಿದಿನ ಭಜನಾ ಸಂಕೀರ್ತನೆ ಸಹಿತ ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮ ಮತ್ತು ಸಾರ್ವಜನಿಕ ಅನ್ನಸಂತರ್ಪಣೆ ನಡೆಯಲಿದೆ.
ಮಹಿಳೆಯರಿಂದ ವಿಶೇಷ ಕುಂಕುಮಾರ್ಚನೆ ಸೇವೆ, ಮಕ್ಕಳು, ಮಹಿಳೆಯರು ಹಾಗೂ ಪುರುಷರಿಗೆ ವಿವಿಧ ವಿಭಾಗದ ಸರ್ಧೆ, ೧೦೮ ಕಾಯಿ ಗಣಯಾಗ, ಧಾರ್ಮಿಕ ಪ್ರವಚನ ನಡೆಯಲಿದ್ದು, ಲಕ್ಷಾಂತರ ಮಂದಿ ಭಾಗವಹಿಸುವ ನಿರೀಕ್ಷೆ ಇದೆ.

ಒಡಿಯೂರು ಗುರುದೇವಾನಂದ ಸ್ವಾಮೀಜಿ, ಕನ್ಯಾಡಿ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ, ಹೊಸ್ಮಾರು ಬಲ್ಯೊಟ್ಟು ವಿಖ್ಯಾತಾನಂದ ಸ್ವಾಮೀಜಿ, ಮಾಣಿಲ ಮೋಹನದಾಸ ಪರಮಹಂಸ ಸ್ವಾಮೀಜಿ, ಅಲ್ಲಿಪಾದೆ ಚರ್ಚ್ ಧರ್ಮಗುರು ರಾಬರ್ಟ್ ಡಿಸೋಜ, ವಿಧಾನಸಭಾಧ್ಯಕ್ಷ ಯು.ಟಿ.ಖಾದರ್, ಅರೋಗ್ಯ ಸಚಿವ ದಿನೇಶ್ ಗುಂಡೂರಾವ್, ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜ, ಡಿಸಿಸಿ ಬ್ಯಾಂಕ್ ಅಧ್ಯಕ್ಷ ಎಂ.ಎನ್. ರಾಜೇಂದ್ರ ಕುಮಾರ್ ಮತ್ತಿತರ ಗಣ್ಯರು ಭಾಗವಹಿಸುವರು ಎಂದು ಅವರು ತಿಳಿಸಿದ್ದಾರೆ.

ಬಿ.ಸಿ.ರೋಡು: ೪೫ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ

ಇಲ್ಲಿನ ಬಿ.ಸಿ.ರೋಡು ಹಿಂದೂ ಧಾರ್ಮಿಕ ಸೇವಾ ಸಮಿತಿ ವತಿಯಿಂದ ಇದೇ ೭ರಿಂದ ೧೦ರತನಕ ಬಿ.ಸಿ.ರೋಡು ಶ್ರೀ ರಕ್ತೇಶ್ವರಿ ದೇವಸ್ಥಾನ ಬಳಿ ೪೫ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ ನಡೆಯಲಿದೆ. ಪ್ರತಿದಿನ ಭಜನೆ, ವಿವಿಧ ಧಾರ್ಮಿಕ ಕಾರ್ಯಕ್ರಮ ಸಹಿತ ಯಕ್ಷಗಾನ, ಭರತನಾಟ್ಯ, ಸಾರ್ವಜನಿಕ ಅನ್ನಸಂತರ್ಪಣೆ, ನಾಟಕ ಮತ್ತಿತರ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.

ಫರಂಗಿಪೇಟೆ: ೪೨ನೇ ವರ್ಷದ ಗಣೇಶೋತ್ಸವ

ಇಲ್ಲಿನ ಫರಂಗಿಪೇಟೆ ಹಿಂದೂ ಧಾರ್ಮಿಕ ಸೇವಾ ಸಮಿತಿ ವತಿಯಿಂದ ೪೨ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ ಕಾರ್ಯಕ್ರಮ ಫರಂಗಿಪೇಟೆ ಸೇವಾಂಜಲಿ ಸಭಾಂಗಣದಲ್ಲಿ ಇದೇ ೭ರಿಂದ ೯ರತನಕ ನಡೆಯಲಿದೆ. ಇದೇ ಭಜನೆ ಸಹಿತ ವೇಳೆ ೧೦೮ ಕಾಯಿ ಗಣಯಾಗ, ತೆನೆ ವಿತರಣೆ, ಮಕ್ಕಳಿಗೆ ಗಣಪತಿ ಚಿತ್ರ ಬಿಡಿಸುವ ಸ್ಪರ್ಧೆ, ಯಕ್ಷಗಾನ, ಧಾರ್ಮಿಕ ಸಭೆ, ಸಾರ್ವಜನಿಕ ಅನ್ನಸಂತರ್ಪಣೆ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.

ರಾಯಿ: ೧೩ನೇ ವರ್ಷದ ಗಣೇಶೋತ್ಸವ

ಇಲ್ಲಿನ ರಾಯಿ ಪೇಟೆಯಲ್ಲಿ ಸಾರ್ವಜನಿಕ ಶ್ರೀ ಗಣೇಶೋತ್ಸವ ಆಚರಣಾ ಸಮಿತಿ ವತಿಯಿಂದ ೧೩ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ ಕಾರ್ಯಕ್ರಮ ಇದೇ ೭ರಿಂದ ೮ರತನಕ ನಡೆಯಲಿದೆ. ಇದೇ ವೇಳೆ ಭಜನೆ ಸಹಿತ ವಿವಿಧ ಧಾರ್ಮಿಕ ಮತ್ತು ಯಕ್ಷಗಾನ ಮತ್ತಿತರ ಸಾಂಸ್ಕೃತಿಕ ಕಾರ್ಯಕ್ರಮ, ಸಾರ್ವಜನಿಕ ಅನ್ನಸಂತರ್ಪಣೆ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.

ಸಿದ್ಧಕಟ್ಟೆ: ೩೭ನೇ ವರ್ಷದ ಗಣೇಶೋತ್ಸವ


ಇಲ್ಲಿನ ಸಿದ್ಧಕಟ್ಟೆ ಹಿಂದೂ ಹಿತರಕ್ಷಣಾ ಸಮಿತಿ ಮತ್ತು ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ವತಿಯಿಂದ ೩೭ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ ಕಾರ್ಯಕ್ರಮ ಇದೇ ೭ರಿಂದ ೯ರತನಕ ನಡೆಯಲಿದೆ. ಇದೇ ವೇಳೆ ಭಜನೆ ಸಹಿತ ಗುಣಶ್ರೀ ವಿದ್ಯಾಲಯ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ, ಭರತನಾಟ್ಯ, ನಾಟಕ, ಯಕ್ಷಗಾನ, ಮಹಿಳಾ ಧಾರ್ಮಿಕ ಸಭೆ, ಸಾರ್ವಜನಿಕ ಅನ್ನಸಂತರ್ಪಣೆ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.

ಬರಿಮಾರು: ಇಂದಿನಿಂದ ೩೯ನೇ ವರ್ಷದ ಗಣೇಶೋತ್ಸವ


ಇಲ್ಲಿನ ಬರಿಮಾರು ಶ್ರೀ ಮಹಮ್ಮಾಯಿ ಸೇವಾ ಸಮಿತಿ ಮತ್ತು ಶ್ರೀದೇವಿ ಸೇವಾ ಟ್ರಸ್ಟ್ ವತಿಯಿಂದ ೩೯ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ ಕಾರ್ಯಕ್ರಮ ಇದೇ ೭ರಿಂದ ೮ರತನಕ ನಡೆಯಲಿದೆ. ಇದೇ ವೇಳೆ ಭಜನೆ ಸಹಿತ ವಿವಿಧ ಸ್ಪರ್ಧೆ, ಧಾರ್ಮಿಕ ಸಭೆ, ಯಕ್ಷಗಾನ, ಸಾರ್ವಜನಿಕ ಅನ್ನಸಂತರ್ಪಣೆ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.

RELATED ARTICLES
- Advertisment -
Google search engine

Most Popular