ಬೆಳಗಾವಿ: ಕರ್ನಾಟಕ-ಮಹಾರಾಷ್ಟ್ರ ಗಡಿಯ ಚೋರ್ಲಾ ಘಾಟ್ನಲ್ಲಿ ನಡೆದ 400 ಕೋಟಿ ದರೋಡೆ ಪ್ರಕರಣದ ಬೆನ್ನಲ್ಲೇ ಅದೇ ಮಾರ್ಗದಲ್ಲಿ ಇನ್ನೊಂದು ಅಕ್ರಮ ನಡೆದಿರುವುದು ಬೆಳಕಿಗೆ ಬಂದಿದೆ. ಪುಷ್ಪ ಸಿನೆಮಾವನ್ನು ನೆನಪಿಸುವಂತೆ ಕಸದ ಮಧ್ಯೆ ಮದ್ಯದ ಬಾಕ್ಸ್ಗಳನ್ನು ಮರೆಮಾಡಿ ಅಕ್ರಮವಾಗಿ ಸಾಗಿಸುತ್ತಿದ್ದ ಗ್ಯಾಂಗ್ ಅನ್ನು ಬೆಳಗಾವಿ ನಗರದ ಮಾಳಮಾರುತಿ ಠಾಣೆ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಗೋವಾದಿಂದ ಮಹಾರಾಷ್ಟ್ರಕ್ಕೆ ಅಕ್ರಮವಾಗಿ ಮದ್ಯ ಸಾಗಿಸಲಾಗುತ್ತಿತ್ತು ಎಂಬ ಖಚಿತ ಮಾಹಿತಿಯ ಮೇರೆಗೆ, ಸಿಪಿಐ ಬಿ.ಆರ್. ಗಡ್ಡೇಕರ್ ಅವರ ನೇತೃತ್ವದಲ್ಲಿ ದಾಳಿ ನಡೆಸಲಾಗಿದೆ. ಬೆಳಗಾವಿ ಮಾರ್ಗವಾಗಿ ಮಹಾರಾಷ್ಟ್ರ ತಲುಪಬೇಕಿದ್ದ ವಾಹನವನ್ನು ಪೊಲೀಸರು ವಶಕ್ಕೆ ಪಡೆದಿದ್ದರು. ಅದರೊಳಗೆ ಕಸ ತುಂಬಿರುವಂತೆ ಬಿಂಬಿಸಿ, ಕಸದ ರಾಶಿಯ ಒಳಭಾಗದಲ್ಲಿ 800 ಬಾಕ್ಸ್ ಅಕ್ರಮ ಗೋವಾ ಮದ್ಯವನ್ನು ಇಟ್ಟು ಸಾಗಿಸಲಾಗುಯತ್ತಿತ್ತು ಎಂಬುದನ್ನು ಪತ್ತೆಹಚ್ಚಿದ್ದಾರೆ.

