Saturday, February 15, 2025
Homeಕಾರ್ಕಳಕಾರ್ಕಳ | ಯುವತಿಯ ಸಾಮೂಹಿಕ ಅತ್ಯಾಚಾರ; ಅನ್ಯಕೋಮಿನ ಇನ್ನೊಬ್ಬ ಆರೋಪಿಯ ಬಂಧನ

ಕಾರ್ಕಳ | ಯುವತಿಯ ಸಾಮೂಹಿಕ ಅತ್ಯಾಚಾರ; ಅನ್ಯಕೋಮಿನ ಇನ್ನೊಬ್ಬ ಆರೋಪಿಯ ಬಂಧನ

ಕಾರ್ಕಳ: ನಗರದ ಯುವತಿಯೊಬ್ಬಳದ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ಮತ್ತೊಬ್ಬ ಆರೋಪಿಯನ್ನು ಬಂಧಿಸಿದ್ದಾರೆ. ಪ್ರಕರಣದಲ್ಲಿ ನಾಲ್ಕು ಮಂದಿ ಅನ್ಯಕೋಮಿನ ಆರೋಪಿಗಳು ಭಾಗಿಯಾಗಿರುವುದಾಗಿ ಕೇಳಿಬಂದಿತ್ತು. ಈ ಹಿನ್ನೆಲೆಯಲ್ಲಿ ಕಾರ್ಕಳ ಸರ್ಕಾರಿ ಆಸ್ಪತ್ರೆ ಮುಂದೆ ಸಂಘಟನೆಗಳ ಕಾರ್ಯಕರ್ತರು ಜಮಾಯಿಸಿ ಆರೋಪಿಗಳ ಬಂಧನಕ್ಕೆ ಒತ್ತಾಯಿಸಿದ್ದರು. ಈ ಹಿನ್ನೆಲೆಯಲ್ಲಿ ಆರೋಪಿಗಳ ಪತ್ತೆಗೆ ಪೊಲೀಸರು ತೀವ್ರ ಕಾರ್ಯಾಚರಣೆ ನಡೆಸಿದ್ದು ಮತ್ತೊಬ್ಬ ಆರೋಪಿಯನ್ನು ಬಂಧಿಸಲಾಗಿದೆ. ಬಂಧಿತ ಎರಡನೇ ಆರೋಪಿಯನ್ನು ಸವೇರಾ ರಿಚರ್ಡ್‌ ಕರ್ಡೋಜ ಎಂದು ಗುರುತಿಸಲಾಗಿದೆ. ಈ ಬಗ್ಗೆ ಎಸ್ಪಿ ಅರುಣ್‌ ಕುಮಾರ್‌ ಮಾಹಿತಿ ನೀಡಿದ್ದಾರೆ.
ಪ್ರಕರಣಕ್ಕೆ ಸಂಬಂಧಿಸಿ ಈಗಾಗಲೇ ಅಲ್ತಾಫ್‌ ಎಂಬಾತನನ್ನು ಬಂಧಿಸಲಾಗಿತ್ತು. ಯುವತಿಗೆ ಅಮಲು ಪದಾರ್ಥ ನೀಡಿ ಅಲ್ತಾಫ್‌ ಎಂಬಾತ ಅತ್ಯಾಚಾರ ಎಸಗಿದ್ದಾನೆ ಎನ್ನಲಾಗಿದೆ. ಆರೋಪಿಗೆ ಅಮಲು ಪದಾರ್ಥ ಹಾಗೂ ಮದ್ಯ ತಂದುಕೊಟ್ಟಿರುವ ಆರೋಪಿಯನ್ನು ಬಂಧಿಸಲಾಗಿದೆ. ಕುಕ್ಕುಂದೂರು ಗ್ರಾಮದ 21ರ ಹರೆಯದ ಯುವತಿಯ ಮೇಲೆ ನಾಲ್ಕು ಮಂದಿ ಅನ್ಯಕೋಮಿನ ಯುವಕರು ಅಮಲು ಪದಾರ್ಥ ನೀಡಿ ಅತ್ಯಾಚಾರ ಎಸಗಿದ್ದಾರೆ ಎನ್ನಲಾಗಿದೆ. ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ಯುವತಿಯನ್ನು ಕಾರ್ಕಳ ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲದ ಕೆಎಂಸಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಆಸ್ಪತ್ರೆ ಎದುರು ಹಿಂದೂ ಸಂಘಟನೆಗಳ ಕಾರ್ಯಕರ್ತರು ಜಮಾಯಿಸಿ, ಆರೋಪಿಗಳ ಬಂಧನಕ್ಕೆ ಆಗ್ರಹಿಸಿದ್ದರು.

RELATED ARTICLES
- Advertisment -
Google search engine

Most Popular