ಉಡುಪಿ: ಎರಡು ತಂಡಗಳ ನಡುವೆ ಗ್ಯಾಂಗ್ ವಾರ್ ನಡೆದ ಘಟನೆ ಉಡುಪಿ-ಮಣಿಪಾಲ ನಡುವಿನ ಹೆದ್ದಾರಿಯಲ್ಲಿ ನಡೆದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಮೇ 18ರಂದು ಈ ಘಟನೆ ನಡೆದಿದೆ ಎನ್ನಲಾಗಿದೆ.
ಕಾಪು ಮೂಲದ ಎರಡು ತಂಡಗಳ ನಡುವೆ ಉಡುಪಿಯ ಕುಂಜಿಬೆಟ್ಟುವಿನಲ್ಲಿ ಈ ಹೊಡೆದಾಟ ನಡೆದಿದೆ. ಕಾರುಗಳಲ್ಲಿ ಬಂದು ಸಿನಿಮೀಯ ಶೈಲಿಯಲ್ಲಿ ಕಾರುಗಳನ್ನು ಡಿಕ್ಕಿ ಹೊಡಿಸಿ, ಹೊಡೆದಾಡಿಕೊಂಡಿದ್ದಾರೆ ಎನ್ನಲಾಗಿದೆ.
ಈ ಕುರಿತ ವಿಡಿಯೋ ವೈರಲ್ ಆಗಿದ್ದು, ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರಿಗೆ ಜೂ.1ರ ವರೆಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಕಾರು ಮಾರಾಟಕ್ಕೆ ಸಂಬಂಧಿಸಿದ ವಿವಾದದಿಂದ ಈ ಗಲಾಟೆ ನಡೆದಿದೆ ಎನ್ನಲಾಗಿದೆ. ಉಡುಪಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.