Wednesday, January 15, 2025
Homeಉಡುಪಿಗಂಗೊಳ್ಳಿ: ಮರದ ದಿಮ್ಮಿಗೆ ಡಿಕ್ಕಿಯಾಗಿ ಮೀನುಗಾರಿಕಾ ಬೋಟ್ ಮುಳುಗಡೆ

ಗಂಗೊಳ್ಳಿ: ಮರದ ದಿಮ್ಮಿಗೆ ಡಿಕ್ಕಿಯಾಗಿ ಮೀನುಗಾರಿಕಾ ಬೋಟ್ ಮುಳುಗಡೆ

ಉಡುಪಿ: ಜಿಲ್ಲೆಯ ಮಲ್ಪೆ ಬಂದರಿನ ಮೀನುಗಾರಿಕಾ ಬೋಟ್ ಗಂಗೊಳ್ಳಿ ಅಳಿವೆ ಸಮೀಪ ಮರದ ದಿಮ್ಮಿಗೆ ಡಿಕ್ಕಿಯಾದ ಪರಿಣಾಮ ಬೋಟ್ ಭಾಗಶಃ ಮುಳುಗಡೆಗೊಂಡು ಲಕ್ಷಾಂತರ ರುಪಾಯಿ ನಷ್ಟವಾಗಿರುವ ಘಟನೆ ಸಂಭವಿಸಿದೆ.

ಸಂಜಾತ ಅವರ ಮಾಲಕತ್ವದ ತವಕಲ್ ಎನ್ನುವ ಹೆಸರಿನ ಮೀನುಗಾರಿಕೆ ಬೋಟನ್ನು ಜ.4 ರಂದು ದುರಸ್ತಿಗೆಂದು ಮೀನುಗಾರರಾದ ರವಿ ಸಾಲ್ಯಾನ್ ಮತ್ತು ಹರೀಶ್ ಅವರು ಮಲ್ಪೆ ಬಂದರಿನಿಂದ ಗಂಗೊಳ್ಳಿಗೆ ಕೊಂಡೊಯ್ಯುತ್ತಿದ್ದರು.

ಗಂಗೊಳ್ಳಿ ಬಂದರಿನ ಅಳಿವೆಯಿಂದ ಸುಮಾರು 2 ನಾಟಿಕಲ್ ಮೈಲು ದೂರದಲ್ಲಿ ಚಲಿಸುತ್ತಿರುವಾಗ ಭಾರೀ ಗಾತ್ರದ ಮರದ ದಿಮ್ಮಿ ತೇಲಿ ಬಂದು ಬೋಟಿಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಬೋಟಿನ ಮುಂಭಾಗದ ತಳಬದಿಯಲ್ಲಿ ಹಾನಿಯಾಗಿ ನೀರು ಒಳ ಬರಲು ಪ್ರಾರಂಭಿಸಿತ್ತು.

ನೀರಿನ ಒಳ ಹರಿವು ಜಾಸ್ತಿಯಾಗಿ ಬೋಟು ಮುಳುಗುವ ಸಂದರ್ಭದಲ್ಲಿ ಮಾಹಿತಿ ಪಡೆದ ಮೀನುಗಾರರು ಜಲರಾಣಿ ಎಂಬ ಹೆಸರಿನ ಬೋಟ್ ರವಾನಿಸಿ ಇಬ್ಬರನ್ನೂ ರಕ್ಷಣೆ ಮಾಡಿದ್ದಾರೆ.

RELATED ARTICLES
- Advertisment -
Google search engine

Most Popular